ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 16ಮಂದಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕಲಕರ್ಣಿ ಸೇರಿದಂತೆ…
ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಒಟ್ಟು 17 ಮಂದಿಯನ್ನು ದೋಷಿಗಳೆಂದು ಘೋಷಿಸಲಾಗಿದ್ದು, ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿ ಗುರುತಿಸಲ್ಪಟ್ಟಿದ್ದಾರೆ. ಕೊಲೆ ಹಾಗೂ ಪಿತೂರಿ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅಪರಾಧಿಗೂ ಜೀವಾವಧಿ ಶಿಕ್ಷೆಯ ಜೊತೆಗೆ ತಲಾ ₹30 ಸಾವಿರ ದಂಡ ವಿಧಿಸಲಾಗಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಸಿಬಿಐ…
ಬಸ್ ಕಾರ್ ನಡುವೆ ಡಿಕ್ಕಿ 9 ಮಂದಿ ಬಲಿ ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಶಾಂತಾಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಒಟ್ಟು 9 ಮಂದಿ ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸ ಎಷ್ಟು ಭೀಕರವಾಗಿತ್ತೆಂದರೆ, ಕಾರು ಮತ್ತು…
ಕರ್ನಾಟಕ ಹೈಕೋರ್ಟ್ 2025-26ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ತೃತೀಯ ಭಾಷೆ ವಿಷಯಗಳ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಅಂಕಗಳನ್ನೇ ನೀಡಬೇಕು ಎಂದು ನಿರ್ದೇಶನ ನೀಡಿದೆ. ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿದಂತೆ ಮೂವರು ವಿದ್ಯಾರ್ಥಿಗಳು ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ…
ಚೆನ್ನೈ:ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಈ ನಡುವೆ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ Thalapathy Vijay ವಿರುದ್ಧ ಪ್ರಕರಣ ದಾಖಲಾಗಿರುವುದು ಗಮನ ಸೆಳೆದಿದೆ. ಗುರುವಾರ (ಏಪ್ರಿಲ್ 16) ಚೆನ್ನೈನ ಮೆಂಬ್ಲಮ್ ಪೊಲೀಸ್ ಠಾಣೆಯಲ್ಲಿ ವಿಜಯ್ ಸೇರಿದಂತೆ ಬುಸ್ಸಿ ಆನಂದ್ ಮತ್ತು ಅಪ್ಪನ್ನು ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನುಮತಿ ಪಡೆಯದೆ ರೋಡ್ ಶೋ ನಡೆಸಿದ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು…
ಬೆಂಗಳೂರು: ಇಷ್ಟು ವರ್ಷಗಳಿಂದ ನಾಪತ್ತೆಯಾಗಿದ್ದ ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಇದೀಗ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿ, ತಮ್ಮ ಜೀವನದ ಸಂಕಷ್ಟಕರ ಅಧ್ಯಾಯವನ್ನು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ್, ತಮ್ಮ ನಾಪತ್ತೆಯ ಹಿಂದಿನ ಕಾರಣಗಳನ್ನು ವಿವರಿಸುತ್ತಾ, ‘ನನ್ನಿಂದ ಹಲವರಿಗೆ ತೊಂದರೆ ಆಗಿದೆ. ಎಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು. ಇಂಜಿನಿಯರಿಂಗ್ ಮುಗಿಸಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಆರಂಭಿಸಿದ ಅವರು ನಂತರ ದರ್ಶನ್ ಅವರ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದಾಗಿ ಹೇಳಿದರು. ಸಿನಿಮಾ ನಿರ್ಮಾಣ, ಡಿಸ್ಟ್ರಿಬ್ಯೂಷನ್…
ಆನೇಕಲ್ ತಾಲ್ಲೂಕಿನ ಗೌರೇನಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸ್ಕ್ರಾಪ್ ಗೋಡೋನ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, ಗೋಡೋನ್ ಒಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬೆಂಕಿ ಕಾಣುತ್ತಿದ್ದಂತೆ ತಕ್ಷಣ ಹೊರಗೆ ಓಡಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಗೋಡೋನ್ನಲ್ಲಿ ಕೆಮಿಕಲ್ ವೇಸ್ಟ್ ಡ್ರಮ್ಗಳು ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದು, ಬೆಂಕಿ ವೇಗವಾಗಿ ವ್ಯಾಪಿಸಲು ಕಾರಣವಾಗಿದೆ…
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳಿಗೆ ಕಳೆದ ಕೆಲವು ದಿನಗಳಿಂದ ವಿರಾಟ್ ಕೊಹ್ಲಿ ಅವರ ಫಿಟ್ನೆಸ್ ಬಗ್ಗೆ ದೊಡ್ಡ ಆತಂಕವಿತ್ತು. ಮೈದಾನದಲ್ಲಿ ಕೊಹ್ಲಿ ಅಬ್ಬರಿಸುವುದನ್ನು ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ, ತಂಡದ ನಾಯಕ ರಜತ್ ಪಾಟೀದಾರ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ಗಾಯದ ಸಮಸ್ಯೆ?: ಕಳೆದ ಪಂದ್ಯದಲ್ಲಿ ಬೌಂಡರಿ ಲೈನ್ ಬಳಿ ಚೆಂಡನ್ನು ತಡೆಯುವ ಪ್ರಯತ್ನದಲ್ಲಿ ವಿರಾಟ್ ಕೊಹ್ಲಿ ಕಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದರಿಂದಾಗಿ ಅವರು ಪಂದ್ಯದ ಮಧ್ಯದಲ್ಲೇ ಮೈದಾನದಿಂದ ಹೊರನಡೆದಿದ್ದರು. ಇದು ದೊಡ್ಡ ಮಟ್ಟದ…
ಕನ್ನಡ ಕಂಠೀರವ, ಕನ್ನಡಿಗರ ಆರಾಧ್ಯ ದೈವ ಡಾ. ರಾಜ್ಕುಮಾರ್ ಅವರು ಭೌತಿಕವಾಗಿ ನಮ್ಮನ್ನು ಅಗಲಿದ್ದರೂ, ಅವರ ನೆನಪುಗಳು ಮಾತ್ರ ಎಂದಿಗೂ ಅಜರಾಮರ. ಇಂದು ಅಣ್ಣಾವ್ರ ಪುಣ್ಯಸ್ಮರಣೆಯ ಅಂಗವಾಗಿ ಇಡೀ ಕರ್ನಾಟಕವೇ ಈ ಮಹಾನ್ ಚೇತನಕ್ಕೆ ನಮನ ಸಲ್ಲಿಸುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿ ಸ್ಮರಣೆ: ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ. ರಾಜ್ಕುಮಾರ್ ಅವರ ಪುಣ್ಯಭೂಮಿಗೆ ಇಂದು ಬೆಳಿಗ್ಗೆಯಿಂದಲೇ ಅಭಿಮಾನಿಗಳ ಸಾಗರವೇ ಹರಿದುಬರುತ್ತಿದೆ. ಪುಣ್ಯಭೂಮಿಯನ್ನು ಹೂವಿನಿಂದ ಅಲಂಕರಿಸಲಾಗಿದ್ದು, ರಾಜ್ ಕುಟುಂಬದ ಸದಸ್ಯರು ವಿಶೇಷ ಪೂಜೆ ಹಾಗೂ ಹಾಲಿನ ಅಭಿಷೇಕವನ್ನು ನೆರವೇರಿಸಿದ್ದಾರೆ.
ಚೆನ್ನೈನಲ್ಲಿ ನಡೆದ ಐಪಿಎಲ್ 2026ರ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯಭೇರಿ ಬಾರಿಸಿದರೂ, ಉಭಯ ತಂಡಗಳ ಪ್ರಮುಖ ಆಟಗಾರರು ಶಿಸ್ತು ಕ್ರಮದ ಬಲೆಗೆ ಬಿದ್ದಿದ್ದಾರೆ. ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ನಿತೀಶ್ ರಾಣಾ ಮತ್ತು ಸ್ಲೋ ಓವರ್ ರೇಟ್ ಕಾರಣಕ್ಕೆ ರುತುರಾಜ್ ಗಾಯಕ್ವಾಡ್ ಶಿಕ್ಷೆಗೆ ಗುರಿಯಾಗಿದ್ದಾರೆ. ನಿತೀಶ್ ರಾಣಾ ವಾಗ್ವಾದ ಮತ್ತು ದಂಡ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟರ್ ನಿತೀಶ್ ರಾಣಾ ಅವರು 19ನೇ ಓವರ್ನಲ್ಲಿ ನಾಲ್ಕನೇ ಅಂಪೈರ್ ಜೊತೆ ತೀವ್ರ ವಾಗ್ವಾದ ನಡೆಸಿದರು….
ಜಾಗತಿಕ ರಾಜಕೀಯದಲ್ಲಿ ಅಮೆರಿಕ ಮತ್ತು ಕ್ಯೂಬಾ ನಡುವಿನ ಶೀತಲ ಸಮರ ಮತ್ತೆ ಮುನ್ನೆಲೆಗೆ ಬಂದಿದೆ. ಕ್ಯೂಬಾದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕ್ಯೂಬಾ ಅಧ್ಯಕ್ಷ ಮಿಗುಯೆಲ್ ಡಿಯಾಜ್-ಕೆನೆಲ್, ಯಾವುದೇ ರೀತಿಯ ಮಿಲಿಟರಿ ಆಕ್ರಮಣವನ್ನು ಎದುರಿಸಲು ತಮ್ಮ ದೇಶ ಸಿದ್ಧವಾಗಿದೆ ಎಂದು ಘೋಷಿಸಿದ್ದಾರೆ. ಎನ್ಬಿಸಿ ನ್ಯೂಸ್ನ ‘ಮೀಟ್ ದಿ ಪ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅಧ್ಯಕ್ಷರು, ಅಮೆರಿಕವು ಕ್ಯೂಬಾದ ಮೇಲೆ ದಾಳಿ ಮಾಡಲು ಅಥವಾ ಅಧ್ಯಕ್ಷರ ಅಪಹರಣಕ್ಕೆ ಸಂಚು ರೂಪಿಸಲು ಯಾವುದೇ ಮಾನ್ಯ ಕಾರಣಗಳಿಲ್ಲ. ಒಂದು…