ನಮ್ಮ ಮೇಲೆ ದಾಳಿ ಮಾಡಿದರೆ ಸುಮ್ಮನಿರಲ್ಲ: ಅಮೆರಿಕಕ್ಕೆ ಕ್ಯೂಬಾ ಅಧ್ಯಕ್ಷ ಮಿಗುಯೆಲ್ ಡಿಯಾಜ್ ಎಚ್ಚರಿಕೆ!
ಜಾಗತಿಕ ರಾಜಕೀಯದಲ್ಲಿ ಅಮೆರಿಕ ಮತ್ತು ಕ್ಯೂಬಾ ನಡುವಿನ ಶೀತಲ ಸಮರ ಮತ್ತೆ ಮುನ್ನೆಲೆಗೆ ಬಂದಿದೆ. ಕ್ಯೂಬಾದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕ್ಯೂಬಾ ಅಧ್ಯಕ್ಷ ಮಿಗುಯೆಲ್ ಡಿಯಾಜ್-ಕೆನೆಲ್, ಯಾವುದೇ ರೀತಿಯ ಮಿಲಿಟರಿ ಆಕ್ರಮಣವನ್ನು ಎದುರಿಸಲು ತಮ್ಮ ದೇಶ ಸಿದ್ಧವಾಗಿದೆ ಎಂದು ಘೋಷಿಸಿದ್ದಾರೆ. ಎನ್‌ಬಿಸಿ ನ್ಯೂಸ್‌ನ ‘ಮೀಟ್ ದಿ ಪ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅಧ್ಯಕ್ಷರು, ಅಮೆರಿಕವು ಕ್ಯೂಬಾದ ಮೇಲೆ ದಾಳಿ ಮಾಡಲು ಅಥವಾ ಅಧ್ಯಕ್ಷರ ಅಪಹರಣಕ್ಕೆ ಸಂಚು ರೂಪಿಸಲು ಯಾವುದೇ ಮಾನ್ಯ ಕಾರಣಗಳಿಲ್ಲ. ಒಂದು…

