ಸಾತ್ತಾಂಕುಲಂ ಲಾಕಪ್ ಡೆತ್ ಪ್ರಕರಣ: ಒಂಬತ್ತು ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ..
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ಸಾತ್ತಾಂಕುಲಂ ತಂದೆ-ಮಗನ ಲಾಕಪ್ ಡೆತ್ ಪ್ರಕರಣದಲ್ಲಿ ಮಧುರೈ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಈ ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಒಂಬತ್ತು ಪೊಲೀಸರಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. “ರಕ್ಷಣೆ ಮಾಡಬೇಕಾದವರೇ ಭಕ್ಷಕರಾದಾಗ ಇಂತಹ ಶಿಕ್ಷೆ ಅನಿವಾರ್ಯ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. 2020ರ ಜೂನ್ ತಿಂಗಳಲ್ಲಿ ಕೋವಿಡ್ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಅಂಗಡಿ ತೆರೆದಿದ್ದರು ಎಂಬ ಸಣ್ಣ ಕಾರಣಕ್ಕಾಗಿ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತ್ತಾಂಕುಲಂ ಪೊಲೀಸರು ಪಿ. ಜಯರಾಜ್ (58) ಮತ್ತು…

