ಲ್ಯಾಬ್‌ನಲ್ಲಿ ಸುರಕ್ಷತೆ ಪ್ರಶ್ನೆ: ಮಹಿಳೆಗೆ ಜೀವ ಬೆದರಿಕೆ ಆರೋಪ

ಬೆಂಗಳೂರು ನಗರದಲ್ಲಿ ಆತಂಕ ಮೂಡಿಸಿದ ಘಟನೆ!ಬ್ಯಾಡರಹಳ್ಳಿಯ ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ತಪಾಸಣೆಗೆ ಹೋದ ಮಹಿಳೆಗೆ ಕಿರುಕುಳ ಆರೋಪ ಕೇಳಿಬಂದಿದೆ. ರಕ್ತದ ಮಾದರಿ ತೆಗೆದುಕೊಳ್ಳುವ ವೇಳೆ ನಿರ್ಲಕ್ಷ್ಯ ತೋರಿದ ಲ್ಯಾಬ್ ಸಿಬ್ಬಂದಿ, ಮಹಿಳೆ ಪ್ರಶ್ನಿಸಿದಾಗ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಇಷ್ಟೇ ಅಲ್ಲ, ಕೆಲ ದಿನಗಳ ನಂತರ ಮಹಿಳೆಯ ಮನೆಗೆ ತೆರಳಿ ವಿಷಯ ಹೊರಗೆ ಹೇಳಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು-ಮದುರೈ ಬಸ್ ಅಪಘಾತ: ಸೇಲಂನಲ್ಲಿ ಆತಂಕ

ತಮಿಳುನಾಡಿನ ಸೇಲಂ ಸಮೀಪ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ. KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಮದುರೈಗೆ ತೆರಳುತ್ತಿದ್ದ ಈ ಪಲ್ಲಕ್ಕಿ ಬಸ್ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸೇಲಂ ಬಳಿ ಸಾಗುತ್ತಿದ್ದಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಅಪಾಯವನ್ನು ಅರಿತ ಚಾಲಕ ತಕ್ಷಣ ಬಸ್ ಅನ್ನು ರಸ್ತೆ ಬದಿಯ ಮಣ್ಣಿನ ಗುಡ್ಡದ ಮೇಲೆ ಹತ್ತಿಸಿ ನಿಲ್ಲಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ….

Read More

ಬೆಂದಕಾಳೂರಿಗೆ ಬಿಸಿ ಎಚ್ಚರಿಕೆ: ಮೇನಲ್ಲಿ ಇನ್ನಷ್ಟು ಉಷ್ಣತೆ ಏರಿಕೆ ಸಾಧ್ಯತೆ

ಏಪ್ರಿಲ್‌ನಲ್ಲೇ ತೀವ್ರ ಬಿಸಿಲಿನಿಂದ ಕರುನಾಡು ಕಾದ ಕಾವಲಿಯಂತಾಗಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ ಪ್ರಕಾರ, ಮೇ ತಿಂಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆ ಕಾಣಲಿದೆ. 3 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಮೇ ಮೊದಲ ವಾರದಲ್ಲೇ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುಭಾಗದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.ಈ ವರ್ಷ ಮಳೆಯ ಕೊರತೆ ಮತ್ತು ನಿರಂತರ ಬಿಸಿಲು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ದೇಶದ ಹಲವಾರು ನಗರಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ…

Read More

ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು – ಹಾವೇರಿಯಲ್ಲಿ ಹೃದಯ ಕಲುಕುವ ಘಟನೆ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ದುರ್ಘಟನೆ ಸಂಭವಿಸಿದೆ. 52 ವರ್ಷದ ಅಬ್ಬಾಸ್ ನಾಸೂರ್ ಅವರು ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ವೇಳೆ ನದಿಯಲ್ಲಿ ಸ್ನಾನ ಮಾಡಲು ಇಳಿದಾಗ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯ ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನುರಿತ ಈಜು ತಜ್ಞರು ಶೋಧ ಕಾರ್ಯ ನಡೆಸಿದರು. ಆದರೆ ವ್ಯಕ್ತಿಯನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ. ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ…

Read More

ಚಿಕ್ಕಮಗಳೂರು ಬೀರೂರು: ಕೌಟುಂಬಿಕ ಕಲಹದಿಂದ ಸಬ್ ಇನ್ಸ್‌ಪೆಕ್ಟರ್ ಪತ್ನಿ ಪದ್ಮ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ದುರಂತ ಘಟನೆ ನಡೆದಿದೆ. ಬೀರೂರು ಠಾಣೆಯ ಸಬ್ ಇನ್ಸ್‌ಪೆಕ್ಟರ್ ತಿಪ್ಪೇಶ್ ಅವರ ಪತ್ನಿ ಪದ್ಮ (34) ಕೌಟುಂಬಿಕ ಕಲಹದಿಂದ ಬೇಸತ್ತು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೂಲಗಳ ಪ್ರಕಾರ, ತಿಪ್ಪೇಶ್ ಮತ್ತು ಪದ್ಮ ಪ್ರೀತಿಸಿ ಮದುವೆಯಾಗಿದ್ದು, ಇಬ್ಬರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಇತ್ತೀಚೆಗೆ ದಂಪತಿಯ ನಡುವೆ ಕೌಟುಂಬಿಕ ಕಲಹ ಹೆಚ್ಚಾಗಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪದ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬೆಳಕಿಗೆ ಬಂದ…

Read More

ಕಾಂತಾರ’ ಹಿಟ್ ಬಳಿಕ ಹಳೆಯ ಸಿನಿಮಾ ರಿಲೀಸ್: ರಿಷಬ್ ಶೆಟ್ಟಿ ತೆಲುಗಿಗೆ ಎಂಟ್ರಿ

ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿರುವ ರಿಷಬ್ ಶೆಟ್ಟಿ ಅವರ ಹಳೆಯ ಸಿನಿಮಾವೊಂದು ಈಗ ಮತ್ತೆ ಸುದ್ದಿಯಲ್ಲಿದೆ. ‘ಹರಿಕಥೆ ಅಲ್ಲ ಗಿರಿಕಥೆ’ ಎಂಬ ಚಿತ್ರವು ಇದೀಗ ‘ಎ ಫಿಲ್ಮ್ ಬೈ ಗಿರಿ’ ಹೆಸರಿನಲ್ಲಿ ತೆಲುಗಿಗೆ ಡಬ್ ಆಗಿ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಮೇ 8ರಂದು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ತೆರೆಗೆ ಬರಲಿದೆ. ವಿಶೇಷವೆಂದರೆ, ಈ ಚಿತ್ರವು 2022ರಲ್ಲಿ ‘ಕಾಂತಾರ’ ಬಿಡುಗಡೆಯಕ್ಕೂ ಮೊದಲು ತೆರೆಕಂಡಿತ್ತು. ಆಗ ಈ ಚಿತ್ರ…

Read More

ಸ್ಮಶಾನದಲ್ಲಿ ಮದುವೆ! ಉರಿಯುವ ಚಿತೆಗಳ ನಡುವೆ ಸಪ್ತಪದಿ – ಉತ್ತರಾಖಂಡದಲ್ಲಿ ವಿವಾದ

ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ವಿಚಿತ್ರ ಮದುವೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಉರಿಯುವ ಚಿತೆಗಳ ನಡುವೆ ನವ ಜೋಡಿ ಸಪ್ತಪದಿ ತುಳಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ವಿವರ:ಹೌದು, ರಾಮಗಂಗಾ ಮತ್ತು ಬದನ್‌ಗಢ ನದಿಗಳ ಸಂಗಮದಲ್ಲಿರುವ ಸ್ಮಶಾನದಲ್ಲಿ ಈ ಘಟನೆ ನಡೆದಿದೆ. ದಶಕಗಳಿಂದ ಅಂತ್ಯಕ್ರಿಯೆ ನಡೆಯುವ ಈ ಪವಿತ್ರ ಸ್ಥಳವನ್ನು ಪ್ರವಾಸಿಗರು ಮದುವೆ ಸ್ಥಳವನ್ನಾಗಿ ಪರಿವರ್ತಿಸಿದ್ದರು. ಚಿತೆಗಳ ನಡುವೆ ಮಂಟಪ ನಿರ್ಮಿಸಿ, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿ ಅದ್ದೂರಿಯಾಗಿ ಮದುವೆ ನೆರವೇರಿಸಲಾಗಿದೆ….

Read More

ಟಾಲಿವುಡ್‌ನ ಹಾಟ್ ಜೋಡಿ ರೀ-ಎಂಟ್ರಿ: ನಾಗಾರ್ಜುನ ಜೊತೆ ಟಬು ಮತ್ತೆ ತೆರೆಗೆ

ಟಾಲಿವುಡ್‌ನ ಹಿಟ್ ಜೋಡಿ ನಾಗಾರ್ಜುನ ಮತ್ತು ಟಬು ಮತ್ತೆ ಒಂದಾಗುತ್ತಿರುವ ಸುದ್ದಿ ಸಿನಿ ಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿದೆ. ದಶಕಗಳ ಹಿಂದೆ ರೊಮ್ಯಾಂಟಿಕ್ ಸಿನಿಮಾಗಳಲ್ಲಿ ಮಿಂಚಿದ್ದ ಈ ಜೋಡಿ ಈಗ 28 ವರ್ಷಗಳ ಬಳಿಕ ಮತ್ತೆ ತೆರೆಗೆ ಬರುತ್ತಿದೆ. ನಾಗಾರ್ಜುನ ತಮ್ಮ 100ನೇ ಸಿನಿಮಾದಾದ ‘ಕಿಂಗ್ 100’ನಲ್ಲಿ ಅಭಿನಯಿಸುತ್ತಿದ್ದು, ಈ ಸಿನಿಮಾದಲ್ಲಿ ಟಬು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಟಬು ಶೂಟಿಂಗ್ ಆರಂಭಿಸಿದ್ದು, ಸೆಟ್‌ನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾ ತಂದೆ-ಮಗಳ ಭಾವನಾತ್ಮಕ ಬಾಂಧವ್ಯದ…

Read More

ಸುಶಾಂತ್ ಸಿಂಗ್ ಪ್ರಕರಣ: 6 ವರ್ಷಗಳ ಬಳಿಕ ರಿಯಾ ಚಕ್ರವರ್ತಿಗೆ ಬ್ಯಾಂಕ್ ಹಣದ ಮೇಲಿನ ಹಕ್ಕು ಮರಳಿ!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್‌ಪೂತ್ ಸಾವಿನ ಪ್ರಕರಣ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. 2020ರ ಜೂನ್‌ನಲ್ಲಿ ಮುಂಬೈನ ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಬಳಿಕ ಹಲವು ಕೋನಗಳಲ್ಲಿ ತನಿಖೆ ನಡೆದಿದ್ದು, ಹಲವು ವಿವಾದಗಳಿಗೆ ಕಾರಣವಾಗಿತ್ತು. ಈ ಪ್ರಕರಣದಲ್ಲಿ ಮುಖ್ಯವಾಗಿ ಸುದ್ದಿಯಾದ ಹೆಸರು ನಟಿ ರಿಯಾ ಚಕ್ರವರ್ತಿ. ಸುಶಾಂತ್ ಅವರ ಮಾಜಿ ಗೆಳತಿಯಾಗಿದ್ದ ರಿಯಾ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದವು. ಪ್ರಕರಣದ ಆರಂಭದಲ್ಲಿ ಅವರನ್ನು ‘ವಿಲನ್’ ರೀತಿಯಲ್ಲಿ ಚಿತ್ರಿಸಲಾಗಿದ್ದು, ಅವರು ಜೈಲಿಗೂ…

Read More

ಮೃತ ಸಹೋದರಿಯ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ವ್ಯಕ್ತಿ: 19,300 ರೂ.ಗಾಗಿ ಹೃದಯ ಕಲುಕುವ ಘಟನೆ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಹೃದಯ ಕಲುಕುವ ಹಾಗೂ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತನ್ನ ಮೃತ ಸಹೋದರಿಯ ಬ್ಯಾಂಕ್ ಖಾತೆಯಲ್ಲಿದ್ದ ಕೇವಲ 19,300 ರೂಪಾಯಿಗಳನ್ನು ಪಡೆಯಲು ವ್ಯಕ್ತಿಯೊಬ್ಬ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದಿದ್ದಾನೆ. ಜಿತು ಮುಂಡಾ ಎಂಬ ಈ ವ್ಯಕ್ತಿ, ಸಹೋದರಿ ಕಾಕ್ರಾ ಮುಂಡಾ ನಿಧನವಾದ ನಂತರ ಹಣ ಪಡೆಯಲು ಬ್ಯಾಂಕ್ ಸಂಪರ್ಕಿಸಿದ್ದರು. ಆದರೆ ಖಾತೆದಾರರು ಸ್ವತಃ ಬರಬೇಕು ಅಥವಾ ಕಾನೂನುಬದ್ಧ ದಾಖಲೆಗಳನ್ನು ನೀಡಬೇಕು ಎಂದು ಬ್ಯಾಂಕ್ ಸಿಬ್ಬಂದಿ ಹೇಳಿದ ಕಾರಣ, ಅವನಿಗೆ ಯಾವುದೇ ದಾರಿ ಕಾಣಿಸಲಿಲ್ಲ….

Read More