ಆನೇಕಲ್‌ನಲ್ಲಿ ತಾಯಿ-ಮಗು ನಿಗೂಢ ಸಾವು: ಕೃಷಿ ಹೊಂಡದಲ್ಲಿ ಶವ ಪತ್ತೆ
ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ತಾಯಿ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಲಾವಣ್ಯ (ತಾಯಿ) ಹಾಗೂ ಅವರ 8 ವರ್ಷದ ಮಗಳು ಎಂದು ಗುರುತಿಸಲಾಗಿದೆ. ಇಬ್ಬರ ಶವಗಳು ಗ್ರಾಮದ ಕೃಷಿ ಹೊಂಡದಲ್ಲಿ ಪತ್ತೆಯಾಗಿವೆ. ಈ ದುರ್ಘಟನೆ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನಗಳು ಮೂಡಿದ್ದು, ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದೆ. ಘಟನೆ ಕುರಿತು ಮಾಹಿತಿ ಪಡೆದ ಸೂರ್ಯ ನಗರ ಪೊಲೀಸ್ ಠಾಣೆ ಪೊಲೀಸರು…

