ಚಿಕ್ಕಮಗಳೂರಿನಲ್ಲಿ ಪೊಲೀಸರ ಯಶಸ್ವಿ ಕಾರ್ಯಾಚರಣೆ – ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಪತ್ತೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದ ಘಟನೆ ಒಂದು ಕ್ಷಣ ಆತಂಕ ಹುಟ್ಟಿಸಿದರೂ, ಕೊನೆಗೆ ಖುಷಿಯ ಅಂತ್ಯ ಕಂಡಿದೆ. ಕಾಫಿ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಗಂಡು ಮಗುವನ್ನು ಪೊಲೀಸರು 12 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಮಧ್ಯಪ್ರದೇಶ ಮೂಲದ ಗೋನು ಹಾಗೂ ಸೋನು ದಂಪತಿ ಟೀ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದು, ಅವರ ಮಗು ಇತರ ಮಕ್ಕಳ ಜೊತೆ ಆಟವಾಡುತ್ತಾ ಕಾಫಿ ತೋಟದೊಳಗೆ ಹೋಗಿ ಕಾಣೆಯಾಗಿತ್ತು. ಮಗು…

