ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ರೆ ವಜಾಗೊಳಿಸಿ: ಹಿಮಂತ ಶರ್ಮಾ ಕಿಡಿ

ದಿಸ್ಪುರ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಗಾಳ ಜನರು ಮಮತಾ ಬ್ಯಾನರ್ಜಿಯನ್ನು ಬಹಳ ವರ್ಷಗಳಿಂದ ಸಹಿಸಿಕೊಂಡಿದ್ದಾರೆ. ಈಗ ಜನರು ಬಿಜೆಪಿಗೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಹೀಗಾಗಿ ಅವರು ಅಧಿಕಾರ ತ್ಯಜಿಸಬೇಕು ಎಂದು ಶರ್ಮಾ ಆಗ್ರಹಿಸಿದ್ದಾರೆ. “ಚುನಾವಣಾ ಫಲಿತಾಂಶ ಬಂದ ಬಳಿಕವೂ ‘ನಾನು ರಾಜೀನಾಮೆ ನೀಡುವುದಿಲ್ಲ’ ಎಂದು ಹೇಳುವುದು ಸರಿಯಲ್ಲ. ದೇಶವು ಯಾರೊಬ್ಬರ ಇಚ್ಛೆಯಂತೆ ನಡೆಯುವುದಿಲ್ಲ. ರಾಜ್ಯಪಾಲರು ನಿರ್ದಿಷ್ಟ…

Read More

ಚಾಮರಾಜನಗರದಲ್ಲಿ ಭೀಕರ ಅಪಘಾತ: ಬಾಲಕನಿಗೆ ಟೆಂಪೋ ಡಿಕ್ಕಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೈಕಲ್ ಸವಾರಿ ಮಾಡುತ್ತಿದ್ದ 11 ವರ್ಷದ ಬಾಲಕ ಯಶವಂತ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ ಬಾಲಕನಿಗೆ ಕುಟುಂಬಸ್ಥರು ಇತ್ತೀಚೆಗೆ ಸೈಕಲ್ ಕೊಡಿಸಿದ್ದರು. ಸೈಕಲ್ ಹೊಡೆಯುತ್ತಿದ್ದ ವೇಳೆ ವೇಗವಾಗಿ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟೆಂಪೋವನ್ನು…

Read More

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ: ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು 3 ಮಂದಿ ಸಾವು

ಬ್ರೆಜಿಲ್‌ನ ಬೆಲೊ ಹೊರಿಜಾಂಟೆ ನಗರದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಪೈಲಟ್ ಸೇರಿ ಒಟ್ಟು ಮೂವರು ಮೃತಪಟ್ಟಿದ್ದಾರೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐದು ಜನರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವೊ ಪಾಲೊಗೆ ತೆರಳುತ್ತಿದ್ದ ಈ ವಿಮಾನವು ಟೇಕಾಫ್ ನಂತರ ತಾಂತ್ರಿಕ ದೋಷ ಅಥವಾ ನಿಯಂತ್ರಣ ತಪ್ಪಿದ ಕಾರಣದಿಂದ ಪತನಗೊಂಡಿರಬಹುದು ಎಂದು ಪ್ರಾಥಮಿಕ ವರದಿಗಳು…

Read More

ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಕೋರ್ಟ್ ವಾರೆಂಟ್ – ಹರಿಹರ ನಗರ ಠಾಣೆಗೆ ಆದೇಶ

ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದ ಜಾತಿ ನಿಂದನೆ ಪ್ರಕರಣ ಇದೀಗ ದೊಡ್ಡ ತಿರುವು ಪಡೆದಿದೆ. 2023ರ ವಿಧಾನಸಭೆ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹರಿಹರ ಬಿಎಸ್‌ಪಿ ಮುಖಂಡ ಹನುಮಂತಪ್ಪ ಅವರು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಶಾಸಕರು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಕ್ರಮ ಕೈಗೊಂಡಿದೆ. ನ್ಯಾಯಮೂರ್ತಿ ಸಂತೋಶ್ ಗಜಾನನ…

Read More

ಪ್ರಧಾನಿ ಮೋದಿ ಮೇ 10ರಂದು ಬೆಂಗಳೂರಿಗೆ ಆಗಮನ

ಬೆಂಗಳೂರು: ಇದೇ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಜನ್ಮದಿನದ ಅಂಗವಾಗಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ನಗರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಭದ್ರತೆಯನ್ನು ಕೂಡ ಕಟ್ಟು ನಿಟ್ಟಾಗಿಸಲಾಗುತ್ತಿದೆ. ರಾಜಕೀಯ ಹಾಗೂ ಆಧ್ಯಾತ್ಮಿಕ ವಲಯದಲ್ಲಿ ಈ ಕಾರ್ಯಕ್ರಮ ಸಾಕಷ್ಟು ಗಮನ ಸೆಳೆದಿದ್ದು, ಸಾವಿರಾರು ಮಂದಿ ಭಾಗವಹಿಸುವ ಸಾಧ್ಯತೆ…

Read More

ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇಲ್ಲ: ಆರ್‌.ಬಿ. ತಿಮ್ಮಾಪುರ್

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ R. B. Timmapur ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳುತ್ತಿಲ್ಲ. ಮಾಧ್ಯಮಗಳೇ ಈ ವಿಚಾರವನ್ನು ಹೆಚ್ಚು ಚರ್ಚಿಸುತ್ತಿವೆ. ಯತೀಂದ್ರ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ” ಎಂದು ತಿಳಿಸಿದ್ದಾರೆ. ಇದೇ ವೇಳೆ, ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದ ಅವರು, “ಮಲ್ಲಿಕಾರ್ಜುನ…

Read More

ಹರಿಹರ ಪಂಚಮಸಾಲಿ ಪೀಠದಲ್ಲಿ ನಿಷೇಧಾಜ್ಞೆ: ಸಭೆ, ಸಮಾರಂಭಕ್ಕೆ ಜಿಲ್ಲಾಡಳಿತ ಬ್ರೇಕ್

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ದಿನದಿಂದ ದಿನಕ್ಕೆ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಸಂಘರ್ಷ ತೀವ್ರವಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಠದ ಆವರಣದಲ್ಲಿ ಯಾವುದೇ ಸಭೆ, ಸಮಾರಂಭ, ಸುದ್ದಿಗೋಷ್ಠಿ ನಡೆಸಬಾರದು ಎಂದು ಮೇ 1ರಿಂದ 30ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಚನಾನಂದ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವೆ ಕಳೆದ ಕೆಲವು ವಾರಗಳಿಂದ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ. ಮಠದಲ್ಲಿ ಮಾರ್ಚ್ 10ರಿಂದ ವಿವಿಧ ಗುಂಪುಗಳಿಂದ ನಿರಂತರ ಸಭೆಗಳು, ಸುದ್ದಿಗೋಷ್ಠಿಗಳು ನಡೆಯುತ್ತಿದ್ದು, ಪರಿಸ್ಥಿತಿ…

Read More

“ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ” – ವಿಜಯ್‌ಗೆ ಶಿವಣ್ಣ ಶುಭಾಶಯ

ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಬರೆದಿರುವ Vijay ನೇತೃತ್ವದ ಟಿವಿಕೆ ಪಕ್ಷ ಭರ್ಜರಿ ಪ್ರದರ್ಶನ ನೀಡಿದ್ದು, ಈ ಹಿನ್ನೆಲೆ ಸ್ಯಾಂಡಲ್‌ವುಡ್ ನಟ Shivarajkumar ವಿಶೇಷವಾಗಿ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಶಿವಣ್ಣ, “ಒಮ್ಮೆ ನಾನು ತಮಾಷೆಯಾಗಿ TVK ಅಂದ್ರೆ Try Vijay as King ಅಂದಿದ್ದೆ. ಇಂದು ನಿಜವಾಗಿಯೂ ನೀವು ರಾಜನಂತೆ ಎದ್ದು ನಿಂತಿದ್ದೀರಿ” ಎಂದು ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, “ಟೀಕೆಗಳು ಎದುರಾದ ಸಮಯದಲ್ಲಿ ನೀವು ಮೌನವಾಗಿದ್ದು, ನಿಮ್ಮ ಕೆಲಸಗಳ ಮೂಲಕ…

Read More

ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್‌ಗೆ ಸಾ.ರಾ ಗೋವಿಂದು ತಿರುಗೇಟು

ಬೆಂಗಳೂರು:ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್‌ಗೆ ಸಾ.ರಾ ಗೋವಿಂದು ಅವರು ನಟ ಚೇತನ್ ಅಹಿಂಸಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ಯಾವತ್ತೂ ರಾಜಿ ಆಗಲ್ಲ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್‌ಕುಮಾರ್ ಸಮಾಧಿ ವಿಚಾರದಲ್ಲಿ ಚೇತನ್ ನೀಡಿದ ದೂರಿನ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಗೋವಿಂದು, “48 ವರ್ಷಗಳ ಕನ್ನಡ ಹೋರಾಟದಲ್ಲಿ ನಾನು ಯಾವತ್ತೂ ಹಿಂದೆ ಸರಿದಿಲ್ಲ. ನನಗೆ ಶಕ್ತಿ ಮತ್ತು ಸ್ಫೂರ್ತಿ ಡಾ. ರಾಜ್‌ಕುಮಾರ್” ಎಂದು ಹೇಳಿದರು….

Read More

ಬಂಗಾಳ ಚುನಾವಣೆಯಲ್ಲಿ ಅಚ್ಚರಿ: ಮನೆ ಕೆಲಸಗಾರ್ತಿಯಿಂದ ಶಾಸಕಿ ಆದ: ಕಲಿತಾ ಮಾಝಿ

ಮನೆಗೆಲಸ ಮಾಡಿಕೊಂಡು ತಿಂಗಳಿಗೆ ₹2,500 ಸಂಪಾದಿಸುತ್ತಿದ್ದ ಮಹಿಳೆ ಈಗ ಬಿಜೆಪಿ ಶಾಸಕಿ! ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯೊಬ್ಬರ ಬದುಕು ಸಂಪೂರ್ಣವಾಗಿ ಬದಲಾಗಿದೆ. ಮನೆಗೆಲಸ ಮಾಡಿಕೊಂಡು ತಿಂಗಳಿಗೆ ಕೇವಲ ₹2,500 ಸಂಪಾದನೆ ಮಾಡುತ್ತಿದ್ದ ಕಲಿತಾ ಮಾಝಿ ಈಗ ಬಿಜೆಪಿ ಶಾಸಕಿ ಆಗಿ ಆಯ್ಕೆಯಾಗಿದ್ದಾರೆ. ಕಲಿತಾ ಮಾಝಿ ಅವರು ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಪ್ರತಿಸ್ಪರ್ಧಿಯನ್ನು 12,535 ಮತಗಳ ಅಂತರದಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ಬಾಲ್ಯದಲ್ಲೇ ಶಿಕ್ಷಣವನ್ನು…

Read More