ಬೆಂಗಳೂರಲ್ಲಿ ಖಾಕಿಯ ಭರ್ಜರಿ ಶಿಕಾರಿ – ಹೈಡ್ರೋ ಗಾಂಜಾ ಪೆಡ್ಲರ್ಸ್‌, ಮನೆಗಳ್ಳರು ಸೇರಿ 10 ಮಂದಿ ಅರೆಸ್ಟ್‌

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆ ಕಳ್ಳರು ಹಾಗೂ ಹೈಡ್ರೋ ಗಾಂಜಾ ಪೆಡ್ಲರ್‌ಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಹಾಗೂ 80 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಒಂದು ಕಡೆ ಮನೆ ಕೆಲಸದವರೇ ಮಾಹಿತಿ ಸೋರಿಕೆ ಮಾಡಿ ಮನೆ ಕಳ್ಳತನ ಮಾಡಿಸುತ್ತಿದ್ದ ಜಾಲವನ್ನ ಪೊಲೀಸರು ಭೇದಿಸಿದ್ದಾರೆ. ಮತ್ತೊಂದು ಕಡೆ ರಾತ್ರಿ ವೇಳೆ ಬೆಂಗಳೂರಿಗೆ ಬಂದು ಕಳ್ಳತನ ಮಾಡಿ…

Read More

ನೀಟ್ ಪೇಪರ್ ಲೀಕ್‌ ವಿಚಾರ: ಮರು ಪರೀಕ್ಷೆ ಬೇಗ ನಡೆಸಲಿ ಎಂದ ಅಶ್ವಥ್ ನಾರಾಯಣ

ಬೆಂಗಳೂರು: ಅಶ್ವಥ್ ನಾರಾಯಣ ಅವರು ನೀಟ್ ಮರು ಪರೀಕ್ಷೆ (NEET Re Exam) ಅನ್ನು ತಕ್ಷಣವೇ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಲ ಪ್ರದೇಶಗಳಲ್ಲಿ ಪೇಪರ್ ಲೀಕ್ ಆಗಿರುವ ಬಗ್ಗೆ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರು ಪರೀಕ್ಷೆ ಘೋಷಣೆ ಮಾಡಿರುವುದು ಸರಿಯಾದ ಕ್ರಮ ಎಂದರು. ಮರು ಪರೀಕ್ಷೆಯನ್ನು ರೀ-ಷಡ್ಯೂಲ್ ಮಾಡಿ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗದಂತೆ ತ್ವರಿತವಾಗಿ ನಡೆಸಬೇಕು ಎಂದು ಅವರು ಆಗ್ರಹಿಸಿದರು….

Read More

ಚಿಕ್ಕಬಳ್ಳಾಪುರ ಶಾಕ್: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳು

ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜು ಬಳಿ ನಡೆದಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು ಹಾಗೂ ಕಾನ್ಸ್‌ಟೇಬಲ್ ಭದ್ರತಾ ಕರ್ತವ್ಯದಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿನಿಮಾ ನಟರು ಹಾಗೂ ನಟಿಯರು ಆಗಮಿಸಿದ್ದರಿಂದ ಪೊಲೀಸರು ಗೇಟ್ ಬಳಿ ಭದ್ರತೆಗಾಗಿ ನಿಯೋಜಿತರಾಗಿದ್ದರು. ಈ ವೇಳೆ ಕೆಲವು ವಿದ್ಯಾರ್ಥಿಗಳು ಸೈಲೆನ್ಸರ್ ಬದಲಾಯಿಸಿದ ಬೈಕ್‌ಗಳಲ್ಲಿ ಕರ್ಕಶ ಶಬ್ದ ಮಾಡುತ್ತಾ ಓಡಾಡುತ್ತಿದ್ದರೆಂದು ಹೇಳಲಾಗಿದೆ….

Read More

ಆನೇಕಲ್ ಘೋರ ದುರಂತ: ಅಳಿಯ ಸಾವು, ಮಾವ–ಬಾಮೈದ ಬಂಧನ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಕಾವಲಹೊಸಹಳ್ಳಿಯಲ್ಲಿ ಹೆಂಡತಿ ಮತ್ತು ಮಕ್ಕಳನ್ನು ಮರಳಿ ಕರೆತರಲು ಬಂದಿದ್ದ ಅಳಿಯ ನವೀನ್ (36) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಇದೀಗ ಕೊಲೆ ಪ್ರಕರಣವಾಗಿ ತಿರುಗಿದೆ. ಮೂಲತಃ ತಮಿಳುನಾಡು ನಿವಾಸಿಯಾದ ನವೀನ್, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತ್ನಿ ಸುಚಿತ್ರಾ ಮಕ್ಕಳೊಂದಿಗೆ ತವರು ಮನೆಗೆ ಬಂದಿದ್ದ ಕಾರಣ ಅವರನ್ನು ಮನೆಗೆ ಮರಳಿ ಕರೆದೊಯ್ಯಲು ಆಗಮಿಸಿದ್ದರು. ಆದರೆ, ಈ ವೇಳೆ ಗಂಭೀರ ಘಟನೆ ನಡೆದಿದೆ. ಘಟನೆಯ ದಿನ ನವೀನ್ ಮದ್ಯಪಾನ ಮಾಡಿ ಪತ್ನಿಯ ಮನೆ ಬಳಿ…

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ – 2.25 ಕೋಟಿ ವೆಚ್ಚ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೊಸ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕೈದಿಗಳ ಮೇಲೆ ಇನ್ನಷ್ಟು ಕಟ್ಟುನಿಟ್ಟಿನ ನಿಗಾವಹಿಸಲು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಈ ಯೋಜನೆಗೆ ಕಾರಾಗೃಹ ಇಲಾಖೆ 2.25 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಇದಕ್ಕೂ ಮೊದಲು ಜೈಲಿನಲ್ಲಿ ಎಐ ಕ್ಯಾಮೆರಾ ಬಳಸಿ ಕೈದಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲಾಗುತ್ತಿತ್ತು. ಜೊತೆಗೆ ಡಿಜಿಟಲ್ ಟೋಕನ್ ವ್ಯವಸ್ಥೆ ಹಾಗೂ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿತ್ತು. ಇದೀಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಜೈಲಿನ…

Read More

ಚಿಕ್ಕಬಾಣಾವರ ದುರಂತ: ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಮಗು ಮೃತ

ಬೆಂಗಳೂರು: ಆಟವಾಡುತ್ತಿದ್ದ ಮಕ್ಕಳ ಗುಂಪಿನ ಮೇಲೆ ಕಾಂಪೌಂಡ್ ಗೇಟ್ ಬಿದ್ದು 5 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಗೌಸಿಯಾ (5) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಅಣ್ಣ ಇಮಾಮ್ ಮತ್ತು ತಂಗಿ ಶಕಿಲಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ 3 ವರ್ಷದ ಮಗು ಸುಮಯ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇಮಾಮ್ ರಮೀಜಾ ದಂಪತಿಯ ಮಕ್ಕಳಾದ ಗೌಸಿಯಾ, ಇಮಾಮ್ ಹಾಗೂ…

Read More

ಈಜಲು ಹೋದ ಇಬ್ಬರು ಯುವಕರು ಕೆರೆಯಲ್ಲಿ ನೀರುಪಾಲು

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಚ್ಚರಮಾಕಲಹಳ್ಳಿ ಬಳಿ ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ಇಬ್ಬರು ಯುವಕರು ನೀರುಪಾಲಾಗಿ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಮೃತರನ್ನು ರೋಣೂರು ಹೋಬಳಿ ವ್ಯಾಪ್ತಿಯ ಚಾಂಪಲ್ಲಿ ಗ್ರಾಮದ ನರೇಂದ್ರ (25) ಹಾಗೂ ಚಂದನ್ (23) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇಬ್ಬರೂ ಗಾರೆ ಕೆಲಸಕ್ಕೆ ಪಚ್ಚರಮಾಕಲಹಳ್ಳಿಗೆ ಬಂದಿದ್ದರು. ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದ ತಂಪಿಗಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಕೆರೆಯ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ನೀರಿನಲ್ಲಿ ಮುಳುಗಿ…

Read More

ಲಿವ್ ಇನ್ ಸಂಬಂಧದಲ್ಲಿದ್ದ ಯುವಕ ಆತ್ಮಹತ್ಯೆ – ಮಹಿಳೆ ನಾಪತ್ತೆ

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ 28 ವರ್ಷದ ತಿಪ್ಪೇಸ್ವಾಮಿ ಮೃತ ಯುವಕ ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಮಹಿಳೆ ಹಾಗೂ ತಿಪ್ಪೇಸ್ವಾಮಿ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ಬಳಿಕ ಪ್ರೀತಿಗೆ ಬಿದ್ದಿದ್ದರು. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ. ಸದ್ಯ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದ ಮಹಿಳೆ, ಕಳೆದ ಎರಡು ತಿಂಗಳ ಹಿಂದೆ…

Read More

ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ಸ್ವೀಕಾರ | ಮೋದಿ, ಶಾ ಉಪಸ್ಥಿತಿ

ಬಂಗಾಳ ರಾಜಕೀಯದಲ್ಲಿ ಹೊಸ ಇತಿಹಾಸ!ಬಿಜೆಪಿಯ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಅದ್ಧೂರಿ ಪ್ರಮಾಣ ಸ್ವೀಕಾರ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ 20 ರಾಜ್ಯಗಳ ಸಿಎಂಗಳು ಸಾಕ್ಷಿ ಸುವೇಂದು ಜೊತೆ ದಿಲೀಪ್ ಘೋಷ್ ಸೇರಿದಂತೆ ಹಲವು ನಾಯಕರು ಸಚಿವರಾಗಿ ಪ್ರಮಾಣ ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧನೆ ಮಮತಾ ಬ್ಯಾನರ್ಜಿ ಬಲಗೈಯಾಗಿದ್ದ ಸುವೇಂದು ಬಳಿಕ ಬಿಜೆಪಿ ಸೇರ್ಪಡೆ ನಂದಿಗ್ರಾಮದಿಂದ ಉದಯಿಸಿದ ‘ಜೈಂಟ್ ಕಿಲ್ಲರ್’ ಸುವೇಂದು ಅಧಿಕಾರಿ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 207…

Read More

ಬೀದರ್‌ನಲ್ಲಿ ಬೀದಿ ನಾಯಿ ದಾಳಿ: 5 ತಿಂಗಳ ಕಂದಮ್ಮ ದುರ್ಮರಣ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಬೀದಿ ನಾಯಿಯ ದಾಳಿಗೆ 5 ತಿಂಗಳ ಹಸುಗೂಸು ಶಿವಾನಿ ಸಾವನ್ನಪ್ಪಿದ್ದಾಳೆ. ಸುಧಾ ಮತ್ತು ಸಿದ್ದಪ್ಪ ದಂಪತಿಯ ನಾಲ್ಕನೇ ಹೆಣ್ಣು ಮಗು ಶಿವಾನಿಯಾಗಿದ್ದು, ತಾಯಿ ಮನೆಯ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮಗುವನ್ನು ಮನೆಯ ಪಡಸಾಲೆಯಲ್ಲಿ ಮಲಗಿಸಲಾಗಿತ್ತು. ಇದೇ ವೇಳೆ ಏಕಾಏಕಿ ಮನೆಗೆ ನುಗ್ಗಿದ ಬೀದಿ ನಾಯಿ ಮಗುವಿನ ಮೇಲೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ,…

Read More