ಟಿವಿಕೆ ಮುಖ್ಯಸ್ಥ ನಟ ವಿಜಯ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್!
ತಮಿಳುನಾಡು ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿರುವ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಸ್ಥಾಪಕ ಮತ್ತು ಕಾಲಿವುಡ್ ಸೂಪರ್‌ಸ್ಟಾರ್ ವಿಜಯ್ ಅವರಿಗೆ ರಾಜಕೀಯ ಜೀವನದ ಆರಂಭದಲ್ಲೇ ಕಾನೂನು ಸಂಕಷ್ಟ ಎದುರಾಗಿದೆ. ಚುನಾವಣಾ ಕಣಕ್ಕೆ ಅಧಿಕೃತವಾಗಿ ಪ್ರವೇಶ ಪಡೆದ ಕೇವಲ 24 ಗಂಟೆಗಳ ಒಳಗಾಗಿ, ಚುನಾವಣಾ ನೀತಿ ಸಂಹಿತೆಯನ್ನು (MCC) ಉಲ್ಲಂಘಿಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ವರದಿಗಳ ಪ್ರಕಾರ, ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ವಿಜಯ್ ಅವರು ತಮ್ಮ ಬೆಂಬಲಿಗರೊಂದಿಗೆ ನಡೆಸಿದ ಮೆರವಣಿಗೆ ಅಥವಾ…

