ಹೆದ್ದಾರಿಯಲ್ಲಿ ಹೈಡ್ರಾಮಾ: ತಂಬಾಕು ಸಾಗಿಸುತ್ತಿದ್ದ ಕಾರು ತಡೆದಿದ್ದಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಅನ್ನೇ ಬಾನೆಟ್ ಮೇಲೆ ಎಳೆದೊಯ್ದ ಚಾಲಕ!
ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮೀಯ ಶೈಲಿಯ ಭೀಕರ ಘಟನೆಯೊಂದು ನಡೆದಿದೆ. ಅಕ್ರಮವಾಗಿ ತಂಬಾಕು ಸಾಗಿಸುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ಚಾಲಕನು ಕಾರಿನ ಬಾನೆಟ್ ಮೇಲೆ ಸುಮಾರು ದೂರ ಎಳೆದೊಯ್ದಿದ್ದಾನೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಘಟನೆಯ ಹಿನ್ನೆಲೆ: ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿಗೆ ತೆರಳುವ ಹೆದ್ದಾರಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ಬಂದ ಕಾರೊಂದನ್ನು…

