ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತಾರಕಕ್ಕೇರಿತು: ಇಂದು ಕೋಲ್ಕತ್ತಾಗೆ ಅಮಿತ್ ಶಾ ಭೇಟಿ
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರ ಸ್ವರೂಪ ಪಡೆದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಾತ್ ಹತ್ಯೆಯಾದ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ನಾಯಕ ಮನೋಜ್ ಖಾನ್ ಮೇಲೆ ಕಚ್ಚಾ ಬಾಂಬ್ ದಾಳಿ ಯತ್ನ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಆತಂಕ ಸೃಷ್ಟಿಸಿದೆ. ಹೌರಾದ ಶಿಬ್ಪುರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ದುಷ್ಕರ್ಮಿಗಳು ಅಂಗಡಿಗಳನ್ನ ಧ್ವಂಸಗೊಳಿಸಲು ಯತ್ನಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಬಿಜೆಪಿ ನಾಯಕ ಮನೋಜ್ ಖಾನ್ ಅದೃಷ್ಟವಶಾತ್ ಪಾರಾಗಿದ್ದಾರೆ. ಇದನ್ನ ರಾಜಕೀಯ ಪ್ರತೀಕಾರ ಎಂದು…

