
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ದಾವಣಗೆರೆಯ ಅನೆಕೊಂಡದಲ್ಲಿರುವ ಬಸವೇಶ್ವರ ದೇವಸ್ಥಾನದಿಂದ ಪ್ರಚಾರ ಆರಂಭಿಸಿದ ಅವರು, ಅಂಜನೇಯ ದೇವಸ್ಥಾನ ಹಾಗೂ ಬಸವೇಶ್ವರ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಅವರ ತಾತ ಶಾಮನೂರು ಶಿವಶಂಕರಪ್ಪ ಅವರು ಆರಂಭಿಸುತ್ತಿದ್ದ ಪರಂಪರೆಯಂತೆ, ಈ ಬಾರಿ ಕೂಡ ಈಶಾನ್ಯ ಮೂಲೆಯಿಂದಲೇ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.
ಪ್ರಚಾರದ ವೇಳೆ ಮಾತನಾಡಿದ ಸಮರ್ಥ್ ಶಾಮನೂರು, “ಕ್ಷೇತ್ರದ ಜನರು ನನ್ನನ್ನು ತಮ್ಮ ಮನೆ ಮಗನಂತೆ ಒಪ್ಪಿಕೊಂಡಿದ್ದಾರೆ. ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ನಮ್ಮ ಕುಟುಂಬದವರೇ, ಅವರು ನಮ್ಮ ಜೊತೆಗೆ ಸೇರಿ ಗೆಲುವಿಗೆ ಸಹಕರಿಸುತ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದರು.
ಇನ್ನು ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ತಿಳಿಸಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಮಧ್ಯಭಾಗದಲ್ಲಿ ಮಲ್ಟಿಸ್ಪೆಷಲಿಟಿ ಆಸ್ಪತ್ರೆ ಸ್ಥಾಪನೆ ಮಾಡುವುದಾಗಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಈ ಭರವಸೆಯನ್ನು ಖಚಿತವಾಗಿ ನೆರವೇರಿಸುತ್ತೇನೆ ಎಂದರು.
ಈ ಮೂಲಕ ದಾವಣಗೆರೆ ದಕ್ಷಿಣ ಉಪಚುನಾವಣೆಯ ಕಣ ರಂಗೇರಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ.
“ನಿಮ್ಮ ಸುತ್ತಮುತ್ತಲ ಕ್ಷಣ ಕ್ಷಣದ ಸುದ್ದಿಗಳು ಈಗ ನಿಮ್ಮ ಬೆರಳ ತುದಿಯಲ್ಲಿ. ನಿಮ್ಮ ದಾರಿ ನಮ್ಮ ಜವಾಬ್ದಾರಿ – First Wave News.”

