ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 16ಮಂದಿಗೆ ಜೀವಾವಧಿ ಶಿಕ್ಷೆ

  1. ವಿನಯ್‌ ಕುಲಕರ್ಣಿ(ಅಪರಾಧಿ) 2. ಯೋಗೇಶ್‌ ಗೌಡ(ಕೊಲೆಯಾದ ವ್ಯಕ್ತಿ)

ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್‌ ಕಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಒಟ್ಟು 17 ಮಂದಿಯನ್ನು ದೋಷಿಗಳೆಂದು ಘೋಷಿಸಲಾಗಿದ್ದು, ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿ ಗುರುತಿಸಲ್ಪಟ್ಟಿದ್ದಾರೆ.

ಕೊಲೆ ಹಾಗೂ ಪಿತೂರಿ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅಪರಾಧಿಗೂ ಜೀವಾವಧಿ ಶಿಕ್ಷೆಯ ಜೊತೆಗೆ ತಲಾ ₹30 ಸಾವಿರ ದಂಡ ವಿಧಿಸಲಾಗಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಈಗಾಗಲೇ ಅವರನ್ನು ಹಾಗೂ ಇತರ ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ದಶಕದಷ್ಟು ಕಾಲ ವಿಚಾರಣೆಯಲ್ಲಿತ್ತು.

ಕಠಿಣ ಕಾಯ್ದೆಗಳಡಿ ಪ್ರಕರಣ:
ಈ ಪ್ರಕರಣದ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಸಿಬಿಐ ಐಪಿಸಿ ಸೆಕ್ಷನ್ 120(ಬಿ), 302, 217, 201, 143, 147, 148, 149 ಸೇರಿದಂತೆ ಶಸ್ತ್ರಾಸ್ತ್ರ ಕಾಯಿದೆ ಹಾಗೂ ಭ್ರಷ್ಟಾಚಾರ ನಿರೋಧಕ ಕಾಯ್ದೆಗಳಡಿ ಪ್ರಕರಣ ದಾಖಲಿಸಿತ್ತು. ಒಟ್ಟು 21 ಮಂದಿಯನ್ನು ಆರೋಪಿಗಳೆಂದು ಪಟ್ಟಿ ಮಾಡಲಾಗಿದ್ದು, ಅವರಲ್ಲಿ 17 ಮಂದిపై ಅಪರಾಧ ಸಾಬೀತಾಗಿದೆ.

ಕೊಲೆ ನಡೆದಿದ್ದು ಯಾವಾಗ?:
2016ರ ಜೂನ್ 15ರಂದು ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಯೋಗೇಶ್ ಗೌಡರನ್ನು ಹತ್ಯೆ ಮಾಡಲಾಗಿತ್ತು. ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ಈ ಘಟನೆ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು.

ಹಿನ್ನೆಲೆ ಏನು?:
ಯೋಗೇಶ್ ಗೌಡ ಮತ್ತು ವಿನಯ್ ಕುಲಕರ್ಣಿ ನಡುವೆ ರಾಜಕೀಯ ಹಾಗೂ ವೈಯಕ್ತಿಕ ಭಿನ್ನಾಭಿಪ್ರಾಯಗಳು ಇದ್ದವು ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಸಭೆಯಲ್ಲಿ ನಡೆದ ವಾಗ್ವಾದ ಹಾಗೂ ನಂತರ ನಡೆದ ಘಟನೆಗಳು ವೈರತ್ವಕ್ಕೆ ಕಾರಣವಾಗಿದ್ದವು ಎಂದು ಆರೋಪಿಸಲಾಗಿದೆ.

ಭದ್ರತೆ ಹೆಚ್ಚಳ:
ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್‌ಟಿಐ ಕಾರ್ಯಕರ್ತ ಬಸವರಾಜ ಕೊರವರ್ ಅವರ ಮನೆಗೆ ಪೊಲೀಸರು ಕಟ್ಟು ನಿಟ್ಟಿನ ಭದ್ರತೆ ಒದಗಿಸಿದ್ದಾರೆ. https://fb.watch/GxPi4C-5KC/

Leave a Reply

Your email address will not be published. Required fields are marked *