ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ..! ರಾಜ್ಯದಾದ್ಯಂತ ಚರ್ಚೆಗೆ ಗ್ರಾಸ.

ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ ಈ ದುರ್ಘಟನೆ ನಡೆದಿದೆ.

ಅಮೆರಿಕದ ವಾಷಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು “ದೇವಿ ವಿಲ್ಲಾ” ಹೋಂಸ್ಟೇಯಲ್ಲಿ ವಾಸವಾಗಿದ್ದ ವೇಳೆ, ಅಲ್ಲಿ ಕೆಲಸ ಮಾಡುತ್ತಿದ್ದ ಝಾರ್ಖಂಡ್ ಮೂಲದ ವ್ರಿಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದೂರು ಪ್ರಕಾರ, ಆರೋಪಿಯು ಮಹಿಳೆಗೆ ಮದ್ಯದಲ್ಲಿ ಮದ್ದು ಹಾಕಿ ಕುಡಿಸಿ ನಂತರ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಮಹಿಳೆ ಹೋಂಸ್ಟೇಯಿಂದ ಹೊರಬಂದು ತನ್ನ ದೇಶದ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದ್ದಾಳೆ. ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಜೊತೆಗೆ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿ ಹಾಗೂ ಮಹಿಳೆಗೆ ದೂರು ನೀಡಲು ಸಹಕರಿಸದ ಆರೋಪದಡಿ ಹೋಂಸ್ಟೇ ಮಾಲೀಕ ವಿಶಾಲ್‌ನನ್ನೂ ಬಂಧಿಸಲಾಗಿದೆ.

ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಬ್ಬರ ಬಂಧನವನ್ನು ದೃಢಪಡಿಸಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *