
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಜಾತ್ರೆಯಲ್ಲಿ ಭೀಕರ ದುರಂತ ಸಂಭವಿಸಿದೆ. ನಗರದ ಥೇರು ಮೈದಾನದಲ್ಲಿ ನಡೆದ ಶ್ರೀ ಬಸವೇಶ್ವರ ಜಾತ್ರೆ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವನ ಎರಡೂ ಕಾಲುಗಳು ಕಟ್ ಆಗಿವೆ.
ಧನರಾಜ್ ಎಂಬ ವ್ಯಕ್ತಿ ರಥದಡಿಗೆ ಸಿಲುಕಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನೆಯ ತೀವ್ರತೆಯಿಂದ ಸ್ಥಳದಲ್ಲೇ ಜನರಲ್ಲಿ ಆತಂಕ ಉಂಟಾಗಿದೆ.
ಇನ್ನೂ ಇಬ್ಬರು ವ್ಯಕ್ತಿಗಳ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮಾಶಂಕರ ಎಂಬ ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಜಾತ್ರೆಯ ಸಂಭ್ರಮದ ನಡುವೆ ನಡೆದ ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಬಳಿಕ ಜಾತ್ರೆಯಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.

