ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌ – 625ಕ್ಕೆ 625 ಅಂಕ ಸಾಧನೆ

ಚಿಕ್ಕೋಡಿ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದಾರ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅಥಣಿ ತಾಲ್ಲೂಕಿನ ಕಟಗೇರಿ ಗ್ರಾಮದ ಪ್ರಾರ್ಥನಾ 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ತಂದೆ ನಾಗಪ್ಪ ಬಿರಾದಾರ ಅವರು ಸರ್ಕಾರಿ ಶಾಲೆ ಶಿಕ್ಷಕರಾಗಿದ್ದು, ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬುದಕ್ಕೆ ಮಗಳೇ ಉದಾಹರಣೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *