
ಮಂಡ್ಯ: ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯಲ್ಲಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಧರ್ಮಗುರುಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಜೀರ್ ಅಹಮ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ವಜಾ ನಿರ್ಧಾರವನ್ನು ಖಂಡಿಸಿ ಮಂಡ್ಯದ ಜಾಮಿಯಾ ಮಸೀದಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಗುರು ಅಬ್ದುಲ್ ಖದೀರ್, “ಮುಸ್ಲಿಂ ಸಮುದಾಯ ಕಾಂಗ್ರೆಸ್‌ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದೆ. ಆದರೆ ಈಗ ನಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.
“ನಾವು ಹಗಲಿರುಳು ಶ್ರಮಿಸಿ ಅಧಿಕಾರಕ್ಕೆ ತಂದಿದ್ದೇವೆ. ಅದೇ ನಾವು ನಿಮ್ಮನ್ನು ಕೆಳಗಿಳಿಸುವುದೂ ಗೊತ್ತು” ಎಂದು ಅವರು ಎಚ್ಚರಿಸಿದರು.
ಇದೇ ವೇಳೆ, ನಜೀರ್ ಅಹಮ್ಮದ್ ಅವರನ್ನು ವಜಾ ಮಾಡುವ ಮೊದಲು ಯಾವುದೇ ನೋಟಿಸ್ ನೀಡಿಲ್ಲ ಎಂಬುದನ್ನು ಪ್ರಶ್ನಿಸಿದ ಅವರು, “ಈ ನಿರ್ಧಾರ ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಯದೆ ಸಾಧ್ಯವೇ?” ಎಂದು ಪ್ರಶ್ನಿಸಿದರು.
ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಹೇಗಿರಲಿದೆ ಎಂಬುದು ಕಾದು ನೋಡಬೇಕಿದೆ.

