
ಇಂಡೋನೇಷ್ಯಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಲೆವೆಲ್ ಕ್ರಾಸಿಂಗ್‌ನಲ್ಲಿ ಟ್ಯಾಕ್ಸಿಯೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹಳಿಯಲ್ಲಿ ನಿಂತಿತ್ತು. ಇದೇ ವೇಳೆಗೆ ಮತ್ತೊಂದು ರೈಲು ಬಂದು ಮಹಿಳೆಯರ ಬೋಗಿಗೆ ಡಿಕ್ಕಿ ಹೊಡೆದಿದೆ.
ಈ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 81 ಮಂದಿಗೆ ಗಾಯಗಳಾಗಿವೆ. ಹಲವರು ಇನ್ನೂ ಬೋಗಿಗಳೊಳಗೆ ಸಿಲುಕಿಕೊಂಡಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆ ವೇಗವಾಗಿ ಮುಂದುವರಿದಿದೆ.
ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ (KNKT) ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದೆ.

