
ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ 9 ವಿಕೆಟ್ಗಳಿಂದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕೇವಲ 75 ರನ್ಗೆ ಆಲೌಟ್ ಆಯಿತು. ಹೇಜಲ್ವುಡ್ ಮತ್ತು ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ಪ್ರದರ್ಶನ ನೀಡಿದರು. ಗುರಿ ಬೆನ್ನಟ್ಟಿದ ಆರ್ಸಿಬಿ ಕೇವಲ 6.3 ಓವರ್ನಲ್ಲಿ ಗೆಲುವು ಸಾಧಿಸಿ ಭರ್ಜರಿ ಸಂದೇಶ ರವಾನಿಸಿದೆ.

