ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು – ಹಾವೇರಿಯಲ್ಲಿ ಹೃದಯ ಕಲುಕುವ ಘಟನೆ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ದುರ್ಘಟನೆ ಸಂಭವಿಸಿದೆ. 52 ವರ್ಷದ ಅಬ್ಬಾಸ್ ನಾಸೂರ್ ಅವರು ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ವೇಳೆ ನದಿಯಲ್ಲಿ ಸ್ನಾನ ಮಾಡಲು ಇಳಿದಾಗ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನೆಯ ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನುರಿತ ಈಜು ತಜ್ಞರು ಶೋಧ ಕಾರ್ಯ ನಡೆಸಿದರು. ಆದರೆ ವ್ಯಕ್ತಿಯನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ. ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *