ವಾಣಿಜ್ಯ LPG ಸಿಲಿಂಡರ್ ಬೆಲೆ ಭಾರೀ ಏರಿಕೆ – ಬೆಂಗಳೂರಿನಲ್ಲಿ ₹3,152ಕ್ಕೆ ಏರಿದ ದರ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1ರಿಂದ ಹೊಸ ದರ ಜಾರಿಗೆ ಬಂದಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹993 ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಕಮರ್ಷಿಯಲ್ ಸಿಲಿಂಡರ್ ದರ ₹3,071.50ಕ್ಕೆ ಏರಿಕೆಯಾಗಿದೆ.

ಬೆಂಗಳೂರುದಲ್ಲೂ ವಾಣಿಜ್ಯ ಗ್ಯಾಸ್ ದರದಲ್ಲಿ ₹991 ಏರಿಕೆಯಾಗಿದ್ದು, ಇಂದಿನಿಂದ ಒಂದು ಸಿಲಿಂಡರ್ ಬೆಲೆ ₹3,152 ಆಗಿದೆ. ಆದರೆ ಗೃಹ ಬಳಕೆಯ 14.2 ಕೆಜಿ LPG ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಜಾಗತಿಕ ಇಂಧನ ದರ ಏರಿಕೆ ಹಾಗೂ ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ ಈ ದರ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್ ಹಾಗೂ ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದ್ದು, ಆಹಾರ ಪದಾರ್ಥಗಳ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *