ನರ್ಸಿಂಗ್ ವಿದ್ಯಾರ್ಥಿ ಸಾವು: ಕಾಲೇಜು ಆಡಳಿತದ ವಿರುದ್ಧ ಪೋಷಕರ ಆರೋಪ ತೀವ್ರ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಖಾಸಗಿ BTL ನರ್ಸಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ಕೇರಳ ಮೂಲದ 19 ವರ್ಷದ ವಿದ್ಯಾರ್ಥಿ ಆದಿತ್ಯ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ಎರಡನೇ ವರ್ಷದ BSc ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಆದಿತ್ಯ, ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಹಪಾಠಿಗಳು ಈ ಘಟನೆ ಕಂಡು ತಕ್ಷಣ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ.

ಮೃತನ ತಂದೆ ಪ್ರದೀಪ್ ಅವರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಮಗನಿಗೆ ಸುಳ್ಳು ಮಾದಕವಸ್ತು ಪ್ರಕರಣದ ಆರೋಪ ಮಾಡಿ ಮಾನಸಿಕ ಹಿಂಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಘಟನೆ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಕಾಲೇಜು ಹಾಸ್ಟೆಲ್ ನಿರ್ವಹಣೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *