
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ R. B. Timmapur ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳುತ್ತಿಲ್ಲ. ಮಾಧ್ಯಮಗಳೇ ಈ ವಿಚಾರವನ್ನು ಹೆಚ್ಚು ಚರ್ಚಿಸುತ್ತಿವೆ. ಯತೀಂದ್ರ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ” ಎಂದು ತಿಳಿಸಿದ್ದಾರೆ.
ಇದೇ ವೇಳೆ, ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದ ಅವರು, “ಮಲ್ಲಿಕಾರ್ಜುನ ಖರ್ಗೆ”
ಅವರು ದಿನಾಂಕ ನೀಡಿ ಕರೆಯುತ್ತೇನೆ ಎಂದಿದ್ದಾರೆ. ಆದರೆ ಇನ್ನೂ ದಿನಾಂಕ ನಿಗದಿಯಾಗಿಲ್ಲ” ಎಂದು ಹೇಳಿದ್ದಾರೆ.

