ಪ್ರಧಾನಿ ಮೋದಿ ಮೇ 10ರಂದು ಬೆಂಗಳೂರಿಗೆ ಆಗಮನ

ಬೆಂಗಳೂರು: ಇದೇ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಜನ್ಮದಿನದ ಅಂಗವಾಗಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ನಗರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಭದ್ರತೆಯನ್ನು ಕೂಡ ಕಟ್ಟು ನಿಟ್ಟಾಗಿಸಲಾಗುತ್ತಿದೆ.

ರಾಜಕೀಯ ಹಾಗೂ ಆಧ್ಯಾತ್ಮಿಕ ವಲಯದಲ್ಲಿ ಈ ಕಾರ್ಯಕ್ರಮ ಸಾಕಷ್ಟು ಗಮನ ಸೆಳೆದಿದ್ದು, ಸಾವಿರಾರು ಮಂದಿ ಭಾಗವಹಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *