ಡಾಕ್ಟರ್ ಆತ್ಮಹತ್ಯೆ ಬಳಿಕ ನರ್ಸ್ ಸಾವು – ಅಕ್ರಮ ಸಂಬಂಧ ಶಂಕೆ

ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಆತಂಕ ಹುಟ್ಟಿಸುವ ಘಟನೆ ನಡೆದಿದೆ. ವೈದ್ಯ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳಲ್ಲೇ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೂಡ ನೇಣಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕನಕಪುರದ ಮಹದೇಶ್ವರ ಬಡಾವಣೆಯ ನಿವಾಸಿಯಾಗಿದ್ದ 45 ವರ್ಷದ ಸರಸ್ವತಿ, ನವೋದಯ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದೆ ಇದೇ ಆಸ್ಪತ್ರೆಯ ವೈದ್ಯರಾದ ಡಾ. ಚೇತನ್ ಟೆಂಕರ್ ಕೌಟುಂಬಿಕ ಕಲಹದ ಹಿನ್ನೆಲೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ವೈದ್ಯರ ಸಾವಿನ ಬೆನ್ನಲ್ಲೇ ನರ್ಸ್ ಸರಸ್ವತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಡಾಕ್ಟರ್ ಹಾಗೂ ನರ್ಸ್ ನಡುವೆ ಅಕ್ರಮ ಸಂಬಂಧ ಇತ್ತು ಎಂಬ ಶಂಕೆ ವ್ಯಕ್ತವಾಗುತ್ತಿದೆ ಎನ್ನಲಾಗಿದೆ.

ಘಟನೆ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.

ಎರಡು ದಿನಗಳ ಅಂತರದಲ್ಲಿ ಆಸ್ಪತ್ರೆಯ ಇಬ್ಬರು ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

Leave a Reply

Your email address will not be published. Required fields are marked *