
ಬೆಂಗಳೂರು ನಗರದಲ್ಲಿ ದೊಡ್ಡ ಮಟ್ಟದ ಚಿನ್ನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಕಡಿಮೆ ಬಡ್ಡಿಯ ಆಮಿಷ ನೀಡಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಕೋಟ್ಯಂತರ ರೂ. ವಂಚಿಸಿದ ಜ್ಯುವೆಲರಿ ಶಾಪ್ ಮಾಲೀಕ ತೇಜಸ್ ಗೌಡ ಪರಾರಿಯಾಗಿದ್ದಾನೆ.
ರಾಘವೇಂದ್ರ ಜ್ಯುವೆಲರಿ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ವ್ಯಕ್ತಿ, ಗ್ರಾಹಕರಿಂದ ಚಿನ್ನ ಬಿಡಿಸಿ ತನ್ನ ಅಂಗಡಿಯಲ್ಲಿ ಇಟ್ಟುಕೊಂಡು ನಂತರ ಶಾಪ್ ಮುಚ್ಚಿ ನಾಪತ್ತೆಯಾಗಿದ್ದಾನೆ.
ಮಹಿಳೆಯೊಬ್ಬರು ನೀಡಿದ ದೂರು ಆಧಾರವಾಗಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ಆರೋಪಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಕಳೆದ ಒಂದು ವರ್ಷದಿಂದ ಈ ವಂಚನೆ ನಡೆಯುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

