ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: ಓರ್ವ ಸಾವು

ಬೆಂಗಳೂರು ನಗರದ ನಾಗರಬಾವಿಯ ದುರ್ಗಾ ಶ್ರೀ ಗ್ರ್ಯಾಂಡ್ ಹೋಟೆಲ್‌ನಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆದಲ್ಲಿ 45 ವರ್ಷದ ರಾಜಕುಮಾರ್ ಎಂಬುವವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದರಿಂದ ಮೇಲ್ಮಹಡಿಯಲ್ಲಿ ಸಿಲುಕಿದ್ದ ಸಿಬ್ಬಂದಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.

ಚಿಕಿತ್ಸೆ ಪಡೆಯುತ್ತಿದ್ದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬರಬೇಕಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *