ಶಿವಮೊಗ್ಗ ಪುನರ್ವಸತಿ ಕೇಂದ್ರದಲ್ಲಿ ಯುವತಿ ಅನುಮಾನಾಸ್ಪದ ಸಾವು

ಶಿವಮೊಗ್ಗ ನಗರದ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ ದಾಖಲಾಗಿದ್ದ 17 ವರ್ಷದ ನೇಹಾ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆತಂಕ ಮೂಡಿಸಿದೆ.

ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ನಿವಾಸಿಯಾಗಿದ್ದ ನೇಹಾ ಮಾನಸಿಕ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಕೇಂದ್ರಕ್ಕೆ ದಾಖಲಾಗಿದ್ದರು. ಮಗಳು ಗುಣಮುಖಳಾಗಿ ಮನೆಗೆ ಮರಳುವ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಆಕೆಯ ಸಾವಿನ ಸುದ್ದಿ ಭಾರೀ ಆಘಾತ ತಂದಿದೆ.

ಪುನರ್ವಸತಿ ಕೇಂದ್ರದಲ್ಲಿ ನಿರ್ಲಕ್ಷ್ಯ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನೇಹಾಳನ್ನು ಮಾನಸಿಕ ರೋಗಿಗಳ ಜೊತೆ ಇರಿಸಲಾಗಿತ್ತು ಹಾಗೂ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಗಂಭೀರ ಆರೋಪ ಕೇಳಿಬಂದಿದೆ.

ಘಟನೆ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಯುವತಿಯ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ.

Leave a Reply

Your email address will not be published. Required fields are marked *