
ಬೆಂಗಳೂರು ನಗರವನ್ನು ತಲ್ಲಣಗೊಳಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮಹತ್ವದ ಕ್ರಮ ಕೈಗೊಂಡಿದೆ. ಪ್ರಕರಣ ಸಂಬಂಧ ಶ್ರೀಕಿ @ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಶುಕ್ರವಾರ ರಾತ್ರಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಇಂದು ಬೆಳಿಗ್ಗೆ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳನ್ನು 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ.
ಈ ಪ್ರಕರಣ ರಾಜ್ಯದ ಬಹುಕೋಟಿ ಕ್ರಿಪ್ಟೋಕರೆನ್ಸಿ ಹಗರಣಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತಿದ್ದು, ಹಣದ ಅಕ್ರಮ ವರ್ಗಾವಣೆ ಮತ್ತು ಡಿಜಿಟಲ್ ವಂಚನೆ ಆರೋಪಗಳಡಿ ತನಿಖೆ ಮುಂದುವರಿದಿದೆ.
ಇಡಿ ಅಧಿಕಾರಿಗಳು ಆರೋಪಿಗಳ ವಿಚಾರಣೆ ಮೂಲಕ ಮತ್ತಷ್ಟು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸುವ ಸಾಧ್ಯತೆ ಇದೆ.

