ನೀಟ್ ಪೇಪರ್ ಲೀಕ್‌ ವಿಚಾರ: ಮರು ಪರೀಕ್ಷೆ ಬೇಗ ನಡೆಸಲಿ ಎಂದ ಅಶ್ವಥ್ ನಾರಾಯಣ

ಬೆಂಗಳೂರು: ಅಶ್ವಥ್ ನಾರಾಯಣ ಅವರು ನೀಟ್ ಮರು ಪರೀಕ್ಷೆ (NEET Re Exam) ಅನ್ನು ತಕ್ಷಣವೇ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಲ ಪ್ರದೇಶಗಳಲ್ಲಿ ಪೇಪರ್ ಲೀಕ್ ಆಗಿರುವ ಬಗ್ಗೆ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರು ಪರೀಕ್ಷೆ ಘೋಷಣೆ ಮಾಡಿರುವುದು ಸರಿಯಾದ ಕ್ರಮ ಎಂದರು.

ಮರು ಪರೀಕ್ಷೆಯನ್ನು ರೀ-ಷಡ್ಯೂಲ್ ಮಾಡಿ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗದಂತೆ ತ್ವರಿತವಾಗಿ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೆರಿಟ್ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನ್ಯಾಯ ಆಗಬಾರದು. ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಉಳಿಯಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳ ಭವಿಷ್ಯ ಗಮನದಲ್ಲಿಟ್ಟು ಎಲ್ಲರೂ ಸಹಕರಿಸಬೇಕು ಹಾಗೂ ನೀಟ್ ಮರು ಪರೀಕ್ಷೆಯನ್ನು ಶೀಘ್ರವಾಗಿ ನಡೆಸಬೇಕು ಎಂದು ಅಶ್ವಥ್ ನಾರಾಯಣ ಒತ್ತಾಯಿಸಿದರು.

Leave a Reply

Your email address will not be published. Required fields are marked *