ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು

ಬೆಟ್ಟದ ನೆಲ್ಲಿಕಾಯಿ ನುಂಗಿ 2 ವರ್ಷದ ಮಗು ಸಾವು

ಕೋಲಾರ:

ಆಟವಾಡುತ್ತಿದ್ದ ವೇಳೆ ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಗಾಂಧಿ ಸರ್ಕಲ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ರವಿ ಮತ್ತು ಮಾಲಾ ದಂಪತಿಯ ಎರಡು ವರ್ಷದ ಗಂಡು ಮಗು ವಿಜಯೇಂದ್ರ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಮಾಹಿತಿ ಪ್ರಕಾರ, ಮಗು ಮನೆಯ ಬಳಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಬೆಟ್ಟದ ನೆಲ್ಲಿಕಾಯಿಯನ್ನು ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಅದು ಗಂಟಲಲ್ಲಿ ಸಿಲುಕಿಕೊಂಡ ಪರಿಣಾಮ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.

ತಕ್ಷಣವೇ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರೂ, ಗಂಟಲಲ್ಲಿ ಸಿಲುಕಿದ್ದ ನೆಲ್ಲಿಕಾಯಿಯನ್ನು ವೈದ್ಯರು ಹೊರತೆಗೆದಲು ಸಾಧ್ಯವಾಗಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

ಈ ಘಟನೆ ಬಳಿಕ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *