ರಾಜ್ಯದ ಮಳೆ ಹಾನಿ ಬಗ್ಗೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ, ಇಂದು ಸಿಎಂ ಸಿದ್ದರಾಮಯ್ಯ ಅವರು ತುರ್ತು ಸಭೆ ನಡೆಸಲಿದಿದ್ದಾರೆ. ಸಂಜೆ 6 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣದಿಂದ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು. ಕಾನ್ಫರೆನ್ಸ್‌ನಲ್ಲಿ ಎಲ್ಲಾ ಜಿಲ್ಲೆಯ ಡಿಸಿಗಳು ಹಾಗೂ ಸಿಇಒಗಳು ಜೊತೆ ಸಭೆಯನ್ನ ನಡೆಸಲಿದ್ದಾರೆ. ಇನ್ನೂ ಸಭೆಯಲ್ಲಿ ಮಳೆಯಿಂದ ಆಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ. ಅಲ್ಲದೇ ಜಿಲ್ಲೆಗಳಲ್ಲಿ ಮಳೆ ಪ್ರವಾಹಕ್ಕೆ ಸಂಬಂಧಿಸಿ ಅವಶ್ಯಕ ವ್ಯವಸ್ಥೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಲಿದ್ದಾರೆ. ಇನ್ನೂ ಸಿಎಂ ಜತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
What's Your Reaction?






