ರಾಜ್ಯಪಾಲರಿಂದ ಶೋಕಾಸ್ ನೋಟಿಸ್ ಬೆನ್ನಲ್ಲೇ ಸಿಎಂ ದಿಢೀರ್ ಸಭೆ!
Governor's-Show-Notice-to-Siddaramaiah-and-BJP-Padayatra-Background-CM-Siddaramaiah-Sudden-Meeting

ಮೈಸೂರು: ಸಿದ್ದರಾಮಯ್ಯಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶೋಕಾಸ್ ನೋಟೀಸ್ ಹಾಗೂ ಬಿಜೆಪಿ ಪಾದಯಾತ್ರೆ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಿಢೀರ್ ಸಭೆ ನಡೆಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮೈಸೂರು ಭಾಗದ ಸಚಿವರು, ಶಾಸಕರ ಜೊತೆ ಸಿಎಂ ಸಭೆ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಕೆಲ ದಿನಗಳಿಂದ ಚರ್ಚೆಗೆ ಗ್ರಾಸವಾಗಿರುವ ಮೂಡ ಸೈಟ್ ಹಗರಣಕ್ಕೆ ಸಂಬಂಧಿಸಿ ಈಗಾಗಲೇ ರಾಜ್ಯಪಾಲರು ಶೋಕಾಸ್ ನೋಟೀಸ್ ನೀಡಲಾಗಿದ್ದು. ಈ ಸಭೆಯಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ರವಿಶಂಕರ್, ಹರೀಶಗೌಡ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ ಸೇರಿ ಹಲವು ಶಾಸಕರು ಭಾಗಿಯಾಗಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಕಾನೂನು ಕಾರ್ಯದರ್ಶಿ, ಶಾಸಕ ಪೊನ್ನಣ್ಣ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಸಿಎಂ ಈ ದಿಢೀರ್ ಸಭೆ ಕುತೂಹಲ ಮೂಡಿಸಿದೆ.
What's Your Reaction?






