ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ!
Hindu-organization-protests-against-violence-against-Hindus-in-Bangladesh

ಬಾಂಗ್ಲಾದೇಶದಲ್ಲಿ ರಾಷ್ಟ್ರಪತಿ ಶೇಖ್ ಹಸೀನಾ ರಾಜೀನಾಮೆ ನೀಡಿರುವ ಹಿನ್ನಲೆ, ಪ್ರತಿಭಟನೆಯ ಕಾವು ಜೋರಾಗಿದ್ದು, ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಅಮಾನುಷ ಕೃತ್ಯಗಳು ದಿನೇ-ದಿನೇ ಹೆಚ್ಚಾಗುತ್ತಿದೆ. ಈ ಘಟನೆಯನ್ನ ಖಂಡಿಸಿ ಇಂದು ಹಿಂದೂ ಸಂಘಟನೆ ಪ್ರತಿಭಟನೆ ನಡೆಸಿದೆ. ಸಿಲಿಕಾನ್ ಸಿಟಿಯಲ್ಲಿ ಅನೇಕ ಕಡೆ ಪ್ರತಿಭಟಿಸಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪ್ರಯತ್ನ ಮಾಡಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆಯನ್ನ ನಡೆಸಲಾಗಿದೆ. ಈ ವೇಳೆ ಪ್ರತಿಭಟನೆ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದು, ಫ್ರೀಡಂ ಪಾರ್ಕ್ ಹೋಗಿ ಪ್ರತಿಭಟನೆ ಮಾಡಿ ಎಂದು ತಿಳಿಸಿದ್ದಾರೆ. ಆದ್ರೆ ಹಿಂದೂಪರ ಕಾರ್ಯಕರ್ತರು ಪೊಲೀಸರ ಮನವಿಗೆ ಕ್ಯಾರೆ ಎನ್ನದ, ಕೇಸರಿ ಬಾವುಟ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
What's Your Reaction?






