40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದು ಕಪ್ಪು ಚುಕ್ಕೆ ಇಲ್ಲ!

There-is-not-a-single-black-mark-on-Siddaramaiah-in-40-years-of-politics-MB Patil

Aug 10, 2024 - 05:55
 0  393
40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದು ಕಪ್ಪು ಚುಕ್ಕೆ ಇಲ್ಲ!
Siddaramaiah

ಶಿವಮೊಗ್ಗ: ಮುಡಾ ಹಗರಣ ಬಿಜೆಪಿ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಬಿಜೆಪಿಯವರು ವಿನಃ ಕಾರಣ ಹೋರಾಟ ಮಾಡ್ತಿದ್ದಾರೆ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ದೇವರಾಜ್ ಅರಸು ನಂತರ ಒಬಿಸಿ ಸಮುದಾಯದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿಯವರಿಗೆ ಇದು ಸಹಿಸಲು ಆಗ್ತಿಲ್ಲ. ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮುಡಾ ಹಗರಣ ನಡೆದಾಗ ಬಿಜೆಪಿಯವರೇ ಅಧ್ಯಕ್ಷರಾಗಿದ್ದರು. ಅವರ ಪಕ್ಷದ ಶಾಸಕರೇ ಇದ್ದರು.

ಇನ್ನೂ ಮುರುಗೇಶ ನಿರಾಣಿ, ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು, ಆ ಪ್ರಕರಣ ಏನಾಯ್ತು? ಕೋವಿಡ್ ವೇಳೆ 2,000 ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಅಂತಾ ಯತ್ನಾಳ್ ಆರೋಪ ಮಾಡ್ತಾರೆ. ವಿಜಯೇಂದ್ರ ಮಾರಿಷಸ್‌ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರದ್ದೇ ಪಕ್ಷದ ಯತ್ನಾಳ್ ಆರೋಪ ಮಾಡ್ತಾರೆ. ಹಾಗಿದ್ರೆ ಯತ್ನಾಳ್ ಆರೋಪಕ್ಕೆ ಮೊದಲು ಉತ್ತರ ಕೊಡಲಿ. ನಾವು ಸಹ ಹೋರಾಟ ಮಾಡ್ತೇವೆ, ನ್ಯಾಯಾಂಗ ಹೋರಾಟ ಮಾಡ್ತೇವೆ. ಅವರ ಕಾಲದಲ್ಲಿ 25 - 30 ಹಗರಣ ನಡೆದಿವೆ ಅದನ್ನು ಜನರ ಮುಂದೆ ತಿಳಿಸುತ್ತೇವೆ ಎಂದು ತಿಳಿಸಿದ್ದಾರೆ.

What's Your Reaction?

like

dislike

love

funny

angry

sad

wow