‘ಧುರಂಧರ್ 2’ ಕತೆ ಕದ್ದ ಆರೋಪ | ಆದಿತ್ಯ ಧರ್ ವಿರುದ್ಧ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿ ರೂಪಾಯಿ ದಾಟಿದೆ. ಆದರೆ ಇದೇ ಸಮಯದಲ್ಲಿ ಸಿನಿಮಾ ನಿರ್ದೇಶಕ ಆದಿತ್ಯ ಧರ್ ವಿರುದ್ಧ ಕತೆ ಕದ್ದ ಆರೋಪ ಕೇಳಿಬಂದಿದೆ. ಕರ್ನಾಟಕದ ಸಂತೋಶ್ ಕುಮಾರ್ ಎಂಬುವರು, ‘ಡಿ ಸಾಹೇಬ್’ ಹೆಸರಿನ ಕಥೆಯನ್ನು ತಾವು ಈಗಾಗಲೇ ಸ್ಕ್ರೀನ್ ರೈಟರ್ಸ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿದ್ದಾಗಿ ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ‘ಧುರಂಧರ್ 2’ ಸಿನಿಮಾ ತಮ್ಮ ಕಥೆಯನ್ನು…

