
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಪ್ರಕರಣ ಬಯಲಾಗಿದೆ. ಸಾರ್ವಜನಿಕರ ಸೇವೆಗೆ ನೇಮಕವಾಗಿರುವ ಪೊಲೀಸರು ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಪಿಎಸ್‌ಐ ಭೀಮಪ್ಪ ರಬಕವಿ ಮತ್ತು ಕಾನ್‌ಸ್ಟೇಬಲ್ ಸಂತೋಷ್ ಬಿರಾದಾರ ಅವರು ಮುತ್ತಪ್ಪ ನಾಯ್ಕರ್ ಎಂಬುವವರ ಮೇಲೆ ಇಸ್ಪೀಟ್ ಮತ್ತು ಬಡ್ಡಿ ದಂಧೆ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿದ್ದರೆಂಬ ಆರೋಪ ಕೇಳಿಬಂದಿದೆ. ಪ್ರಕರಣದಿಂದ ಹೆಸರು ಕೈಬಿಡಲು ಮತ್ತು ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಈ ಕುರಿತು ದೂರು ಸ್ವೀಕರಿಸಿದ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ₹1.70 ಲಕ್ಷ ಲಂಚ ಸ್ವೀಕರಿಸುವ ವೇಳೆ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಈ ಘಟನೆ ಪೊಲೀಸರ ಮೇಲಿನ ನಂಬಿಕೆಗೆ ಧಕ್ಕೆ ತರುವಂತಿದ್ದು, ಇಲಾಖೆಯಲ್ಲಿ ಮತ್ತಷ್ಟು ಪಾರದರ್ಶಕತೆ ಅಗತ್ಯವಿದೆ ಎಂಬ ಮಾತು ಕೇಳಿಬರುತ್ತಿದೆ.

