ಬೆಂಗಳೂರಲ್ಲಿ ಖಾಕಿಯ ಭರ್ಜರಿ ಶಿಕಾರಿ – ಹೈಡ್ರೋ ಗಾಂಜಾ ಪೆಡ್ಲರ್ಸ್‌, ಮನೆಗಳ್ಳರು ಸೇರಿ 10 ಮಂದಿ ಅರೆಸ್ಟ್‌

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆ ಕಳ್ಳರು ಹಾಗೂ ಹೈಡ್ರೋ ಗಾಂಜಾ ಪೆಡ್ಲರ್‌ಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಹಾಗೂ 80 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಒಂದು ಕಡೆ ಮನೆ ಕೆಲಸದವರೇ ಮಾಹಿತಿ ಸೋರಿಕೆ ಮಾಡಿ ಮನೆ ಕಳ್ಳತನ ಮಾಡಿಸುತ್ತಿದ್ದ ಜಾಲವನ್ನ ಪೊಲೀಸರು ಭೇದಿಸಿದ್ದಾರೆ. ಮತ್ತೊಂದು ಕಡೆ ರಾತ್ರಿ ವೇಳೆ ಬೆಂಗಳೂರಿಗೆ ಬಂದು ಕಳ್ಳತನ ಮಾಡಿ ಬೆಳಗ್ಗಾಗುವಷ್ಟರಲ್ಲಿ ಮದ್ದೂರಿಗೆ ಮರಳುತ್ತಿದ್ದ ಆರೋಪಿಯನ್ನೂ ಬಂಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೈಡ್ರೋ ಗಾಂಜಾ ಹಾವಳಿ ಹೆಚ್ಚಳ – ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಹೈಡ್ರೋ ಗಾಂಜಾ ಹಾವಳಿ ಮಿತಿಮೀರಿದ್ದು, ಪೊಲೀಸರು ಡ್ರಗ್ಸ್ ಜಾಲದ ವಿರುದ್ಧ ಸತತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ನಡುವೆ ಮಲ್ಲೇಶ್ವರಂ ಪೊಲೀಸರು ಕೇರಳ ಮೂಲದ ಮೊಹಮ್ಮದ್ ಅಫ್ರನ್, ಸಬೀತ್ ಹಾಗೂ ಶ್ರೀನಾಥ್ ಎಂಬ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 464 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜ್ಯೂಸ್ ಅಂಗಡಿ ನಡೆಸುತ್ತಿದ್ದ ಆರೋಪಿಗಳು ಗ್ರಾಹಕರಿಗೆ ಗುಪ್ತವಾಗಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನೊಂದೆಡೆ ಮನೆ ಕಳ್ಳತನ ಪ್ರಕರಣದಲ್ಲಿ ಬಂಧಿತರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *