ಬೆಂಗಳೂರಿನಲ್ಲಿ ಮತ್ತೆ ಕಳ್ಳರ ಅಟ್ಟಹಾಸ – ಗೋಡೆ ಕೊರೆದು ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಗ್ಯಾಂಗ್

ಬೆಂಗಳೂರು ನಗರದಲ್ಲಿ ಮತ್ತೆ ಕಳ್ಳರ ಅಟ್ಟಹಾಸ ಮೆರೆದಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆ ಗಗನಕ್ಕೇರಿರುವ ನಡುವೆಯೇ, ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನ ಎಂಬಿ ಜ್ಯುವೆಲ್ಲರ್ಸ್‌ನಲ್ಲಿ ಭಾರೀ ಕಳ್ಳತನ ನಡೆದಿದೆ. ಸುಮಾರು 1 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ 70 ಕೆಜಿ ಬೆಳ್ಳಿ ವಸ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.

ಕಳ್ಳರು ಅತ್ಯಂತ ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದಾರೆ. ಮೊದಲು ಜ್ಯುವೆಲ್ಲರಿ ಅಂಗಡಿಯ ಹಿಂಭಾಗದ ಕೊಠಡಿಯ ಬೀಗ ಮುರಿದು ಒಳನುಗ್ಗಿದ್ದಾರೆ. ನಂತರ ಗೋಡೆಯನ್ನೇ ಕೊರೆದು ಅಂಗಡಿಯೊಳಗೆ ಪ್ರವೇಶಿಸಿ ಬೆಳ್ಳಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸರಣಿ ಕಳ್ಳತನ ಪ್ರಕರಣಗಳು ವ್ಯಾಪಾರಿಗಳಲ್ಲಿ ಭಾರೀ ಆತಂಕ ಮೂಡಿಸುತ್ತಿವೆ.

Leave a Reply

Your email address will not be published. Required fields are marked *