ಬೆಂಗಳೂರಿನಲ್ಲಿ ಶಾಕಿಂಗ್ ಕೊಲೆ ಕೇಸ್ – ವೃದ್ಧೆಗೆ ಡಿಕ್ಕಿ ಹೊಡೆದು ಹಣ ದೋಚಲು ಪ್ಲಾನ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವಂತ ಪ್ರಕರಣೊಂದು ಬೆಳಕಿಗೆ ಬಂದಿದೆ. ಸಾಲ ಪಡೆದಿದ್ದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದೇ, ವೃದ್ಧೆಯನ್ನೇ ಉದ್ದೇಶಪೂರ್ವಕವಾಗಿ ಅಪಘಾತಕ್ಕೊಳಪಡಿಸಿ ಕೊಲೆ ಮಾಡಿರುವ ಶಾಕಿಂಗ್ ಘಟನೆ ಕುರುಬರಹಳ್ಳಿಯಲ್ಲಿ ನಡೆದಿದೆ.

ವಿಜಯಲಕ್ಷ್ಮಿ ಎಂಬ ಒಂಟಿ ಮಹಿಳೆ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿ ಚೇತನ್ ಆಕೆಯಿಂದ ಹಣ ಸಾಲ ಪಡೆದಿದ್ದ. ಆದರೆ ಹಣ ಮರಳಿಸಲು ಆಗದೇ, ವಿಜಯಲಕ್ಷ್ಮಿ ಬಳಿ ಇನ್ನಷ್ಟು ಹಣ ಇದೆ ಎಂದು ತಿಳಿದು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾನೆ.

ಪ್ಲಾನ್ ಪ್ರಕಾರ ರಾಕೇಶ್ ಬೈಕ್‌ನಿಂದ ವಿಜಯಲಕ್ಷ್ಮಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಪ್ರದೀಪ್, ಯೋಹಾನ್ ಹಾಗೂ ಮಂಜುನಾಥ್ ಸೇರಿ ಆಸ್ಪತ್ರೆಗೆ ಕರೆದೊಯ್ಯುವ ನಾಟಕವಾಡಿದ್ದಾರೆ. ಇದೇ ವೇಳೆ ವಿಜಯಲಕ್ಷ್ಮಿ ಪರ್ಸ್‌ನಲ್ಲಿದ್ದ ಮನೆ ಕೀ ಪಡೆದು ಮನೆಗೆ ನುಗ್ಗಿ ಹಣ ಹಾಗೂ ಚಿನ್ನಾಭರಣ ಹುಡುಕಲು ಯತ್ನಿಸಿದ್ದಾರೆ.

ಅಕ್ಕಪಕ್ಕದ ನಿವಾಸಿಗಳಿಗೆ ಅನುಮಾನ ಬಂದು ಪ್ರಶ್ನಿಸಿದಾಗ, ಆಧಾರ್ ಕಾರ್ಡ್ ಬೇಕು ಎಂದು ಸುಳ್ಳು ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಬಳಿಕ ಪ್ರಕರಣದ ಬಗ್ಗೆ ಅನುಮಾನಗೊಂಡ ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ಪೊಲೀಸರು ತನಿಖೆ ಆರಂಭಿಸಿದಾಗ ಇದು ಸಾಮಾನ್ಯ ಅಪಘಾತವಲ್ಲ, ಉದ್ದೇಶಪೂರ್ವಕ ಕೊಲೆ ಎಂಬ ಸತ್ಯ ಬಯಲಾಗಿದೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಿಳೆ ಸಾವನ್ನಪ್ಪಿದ ಎರಡೇ ದಿನಕ್ಕೆ ಆರೋಪಿ ಮಂಜುನಾಥ್ ಪೊಲೀಸ್ ಕಸ್ಟಡಿಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ.

ಸದ್ಯ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. “ಕರ್ಮ ಯಾರನ್ನೂ ಬಿಡೋದಿಲ್ಲ” ಅನ್ನೋದಕ್ಕೆ ಈ ಘಟನೆ ಮತ್ತೊಂದು ಉದಾಹರಣೆಯಾಗಿದೆ.

Leave a Reply

Your email address will not be published. Required fields are marked *