ದೇವರ ನಾಡಿನಲ್ಲಿ ಬಿಜೆಪಿ ಭರ್ಜರಿ ಗೆಲುವು – ರಾಜಕೀಯ ಸಮೀಕರಣ ಬದಲಾವಣೆ ಸೂಚನೆ

ದೇವರ ನಾಡು ಎಂದು ಕರೆಯಲಾಗುವ ಕೇರಳದಲ್ಲಿ ಈ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಹತ್ವದ ಸಾಧನೆ ಮಾಡಿದೆ. ದಶಕಗಳಿಂದ ನೆಲೆ ಕಂಡುಕೊಳ್ಳಲು ಹೋರಾಡುತ್ತಿದ್ದ ಕಮಲ ಪಕ್ಷ ಈ ಬಾರಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ.

ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ನೇಮಮ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ, ಬಿ.ಬಿ. ಗೋಪಕುಮಾರ್ ಚಾತನ್ನೂರಿನಲ್ಲಿ ಜಯಭೇರಿ ಬಾರಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಮುರಳೀಧರನ್ ಕಲಕುಟ್ಟಂದಿನಲ್ಲಿ ವಿಜಯ ಸಾಧಿಸಿದ್ದಾರೆ.

2016ರಲ್ಲಿ ಮೊದಲ ಬಾರಿಗೆ ನೇಮಮ್ ಕ್ಷೇತ್ರದಲ್ಲಿ ಓ. ರಾಜಗೋಪಾಲ್ ಮೂಲಕ ವಿಧಾನಸಭೆ ಪ್ರವೇಶಿಸಿದ್ದ ಬಿಜೆಪಿ, 2021ರಲ್ಲಿ ಶೂನ್ಯ ಸಾಧನೆ ಕಂಡಿತ್ತು. ಆದರೆ ಈ ಬಾರಿ ಮೂರು ಕ್ಷೇತ್ರಗಳ ಗೆಲುವು ಪಕ್ಷದ ಪುನರುತ್ಥಾನಕ್ಕೆ ಸಾಕ್ಷಿಯಾಗಿದೆ.

ಇತ್ತೀಚೆಗೆ ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ 50 ವಾರ್ಡ್‌ಗಳಲ್ಲಿ ಜಯ ಸಾಧಿಸಿದ್ದ ಬಿಜೆಪಿ, ಈಗ ರಾಜ್ಯ ರಾಜಕೀಯದಲ್ಲಿಯೂ ತನ್ನ ಪ್ರಭಾವ ವಿಸ್ತರಿಸುತ್ತಿದೆ. ಎಲ್‌ಡಿಎಫ್ ಮತ್ತು ಯುಡಿಎಫ್ ನಡುವಿನ ದ್ವಿಪಕ್ಷೀಯ ರಾಜಕಾರಣದಲ್ಲಿ ಬಿಜೆಪಿ ಈಗ ಬಲವಾದ ಮೂರನೇ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Leave a Reply

Your email address will not be published. Required fields are marked *