ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಕೋರ್ಟ್ ವಾರೆಂಟ್ – ಹರಿಹರ ನಗರ ಠಾಣೆಗೆ ಆದೇಶ

ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದ ಜಾತಿ ನಿಂದನೆ ಪ್ರಕರಣ ಇದೀಗ ದೊಡ್ಡ ತಿರುವು ಪಡೆದಿದೆ. 2023ರ ವಿಧಾನಸಭೆ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಹರಿಹರ ಬಿಎಸ್‌ಪಿ ಮುಖಂಡ ಹನುಮಂತಪ್ಪ ಅವರು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಶಾಸಕರು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಕ್ರಮ ಕೈಗೊಂಡಿದೆ.

ನ್ಯಾಯಮೂರ್ತಿ ಸಂತೋಶ್ ಗಜಾನನ ಭಟ್ ಅವರಿಂದ ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ ಮಾಡಲಾಗಿದೆ. ಜೊತೆಗೆ ಇದೇ 7ನೇ ತಾರೀಖು ಶಾಸಕರನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಹರಿಹರ ನಗರ ಪೊಲೀಸ್ ಠಾಣಾಧಿಕಾರಿಗೆ ಸ್ಪಷ್ಟ ಆದೇಶ ನೀಡಲಾಗಿದೆ.

ಈ ಆದೇಶದ ಬಳಿಕ ಪೊಲೀಸರು ಮುಂದಿನ ಕಾನೂನು ಕ್ರಮಕ್ಕೆ ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ಇದೀಗ ರಾಜ್ಯ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *