ಬ್ರೆಜಿಲ್ನಲ್ಲಿ ಭೀಕರ ವಿಮಾನ ದುರಂತ: ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು 3 ಮಂದಿ ಸಾವು
ಬ್ರೆಜಿಲ್ನ ಬೆಲೊ ಹೊರಿಜಾಂಟೆ ನಗರದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಪೈಲಟ್ ಸೇರಿ ಒಟ್ಟು ಮೂವರು ಮೃತಪಟ್ಟಿದ್ದಾರೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐದು ಜನರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವೊ ಪಾಲೊಗೆ ತೆರಳುತ್ತಿದ್ದ ಈ ವಿಮಾನವು ಟೇಕಾಫ್ ನಂತರ ತಾಂತ್ರಿಕ ದೋಷ ಅಥವಾ ನಿಯಂತ್ರಣ ತಪ್ಪಿದ ಕಾರಣದಿಂದ ಪತನಗೊಂಡಿರಬಹುದು ಎಂದು ಪ್ರಾಥಮಿಕ ವರದಿಗಳು…

