ರಾಜ್ಯದ ಹಲವೆಡೆ 3 ದಿನ ಭಾರಿ ಮಳೆ ಎಚ್ಚರಿಕೆ | ಬೆಂಗಳೂರು ಸೇರಿ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು…

