ಫೇಕ್ UPIಗೆ ಬ್ರೇಕ್: ಬಿಎಂಟಿಸಿ ಹೊಸ ಸ್ಮಾರ್ಟ್ ಇಟಿಎಂ ಲಾಂಚ್

ಬೆಂಗಳೂರು: ನಗರದ ಸಾರ್ವಜನಿಕ ಸಾರಿಗೆಗೆ ಜೀವನಾಡಿಯಾಗಿರುವ ಬಿಎಂಟಿಸಿ ಇದೀಗ ಟಿಕೆಟ್ ವಂಚನೆಗೆ ಕಡಿವಾಣ ಹಾಕಲು ಮಹತ್ವದ ಹೆಜ್ಜೆ ಇಟ್ಟಿದೆ. ಬಸ್‌ಗಳಲ್ಲಿ ಹೊಸ ಡೈನಾಮಿಕ್ ಕ್ಯೂಆರ್ ಕೋಡ್ ಆಧಾರಿತ ಇಟಿಎಂ (ETM) ಮಷೀನ್‌ಗಳನ್ನು ಪರಿಚಯಿಸಲು ಮುಂದಾಗಿದ್ದು, ಮುಂದಿನ ತಿಂಗಳಾಂತ್ಯಕ್ಕೆ ಎಲ್ಲಾ ಬಸ್‌ಗಳಲ್ಲಿ ಜಾರಿಗೆ ಬರಲಿದೆ. ಇತ್ತೀಚೆಗೆ ಬಿಎಂಟಿಸಿ ಬಸ್‌ಗಳಲ್ಲಿ ಕಂಡೆಕ್ಟರ್‌ಗಳು ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್ ಬಳಸಿಕೊಂಡು ಪ್ರಯಾಣಿಕರಿಂದ ಹಣ ಪಡೆದು ಟಿಕೆಟ್ ನೀಡದೆ ವಂಚನೆ ಮಾಡಿದ ಘಟನೆಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಇಂತಹ ಕಳ್ಳಾಟಕ್ಕೆ ಬ್ರೇಕ್…

Read More