ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 16ಮಂದಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಒಟ್ಟು 17 ಮಂದಿಯನ್ನು ದೋಷಿಗಳೆಂದು ಘೋಷಿಸಲಾಗಿದ್ದು, ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿ ಗುರುತಿಸಲ್ಪಟ್ಟಿದ್ದಾರೆ. ಕೊಲೆ ಹಾಗೂ ಪಿತೂರಿ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅಪರಾಧಿಗೂ ಜೀವಾವಧಿ ಶಿಕ್ಷೆಯ ಜೊತೆಗೆ ತಲಾ ₹30 ಸಾವಿರ ದಂಡ ವಿಧಿಸಲಾಗಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಸಿಬಿಐ…

