ಚಿಕ್ಕಮಗಳೂರಿನಲ್ಲಿ ಪೊಲೀಸರ ಯಶಸ್ವಿ ಕಾರ್ಯಾಚರಣೆ – ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಪತ್ತೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದ ಘಟನೆ ಒಂದು ಕ್ಷಣ ಆತಂಕ ಹುಟ್ಟಿಸಿದರೂ, ಕೊನೆಗೆ ಖುಷಿಯ ಅಂತ್ಯ ಕಂಡಿದೆ. ಕಾಫಿ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಗಂಡು ಮಗುವನ್ನು ಪೊಲೀಸರು 12 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಮಧ್ಯಪ್ರದೇಶ ಮೂಲದ ಗೋನು ಹಾಗೂ ಸೋನು ದಂಪತಿ ಟೀ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದು, ಅವರ ಮಗು ಇತರ ಮಕ್ಕಳ ಜೊತೆ ಆಟವಾಡುತ್ತಾ ಕಾಫಿ ತೋಟದೊಳಗೆ ಹೋಗಿ ಕಾಣೆಯಾಗಿತ್ತು. ಮಗು…

Read More

ಡಾಕ್ಟರ್ ಆತ್ಮಹತ್ಯೆ ಬಳಿಕ ನರ್ಸ್ ಸಾವು – ಅಕ್ರಮ ಸಂಬಂಧ ಶಂಕೆ

ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಆತಂಕ ಹುಟ್ಟಿಸುವ ಘಟನೆ ನಡೆದಿದೆ. ವೈದ್ಯ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳಲ್ಲೇ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೂಡ ನೇಣಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕನಕಪುರದ ಮಹದೇಶ್ವರ ಬಡಾವಣೆಯ ನಿವಾಸಿಯಾಗಿದ್ದ 45 ವರ್ಷದ ಸರಸ್ವತಿ, ನವೋದಯ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದೆ ಇದೇ ಆಸ್ಪತ್ರೆಯ ವೈದ್ಯರಾದ ಡಾ. ಚೇತನ್ ಟೆಂಕರ್ ಕೌಟುಂಬಿಕ ಕಲಹದ ಹಿನ್ನೆಲೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ…

Read More

ಬೆಂಗಳೂರಿನಲ್ಲಿ ಶಾಕಿಂಗ್ ಕೊಲೆ ಕೇಸ್ – ವೃದ್ಧೆಗೆ ಡಿಕ್ಕಿ ಹೊಡೆದು ಹಣ ದೋಚಲು ಪ್ಲಾನ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವಂತ ಪ್ರಕರಣೊಂದು ಬೆಳಕಿಗೆ ಬಂದಿದೆ. ಸಾಲ ಪಡೆದಿದ್ದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದೇ, ವೃದ್ಧೆಯನ್ನೇ ಉದ್ದೇಶಪೂರ್ವಕವಾಗಿ ಅಪಘಾತಕ್ಕೊಳಪಡಿಸಿ ಕೊಲೆ ಮಾಡಿರುವ ಶಾಕಿಂಗ್ ಘಟನೆ ಕುರುಬರಹಳ್ಳಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ ಎಂಬ ಒಂಟಿ ಮಹಿಳೆ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿ ಚೇತನ್ ಆಕೆಯಿಂದ ಹಣ ಸಾಲ ಪಡೆದಿದ್ದ. ಆದರೆ ಹಣ ಮರಳಿಸಲು ಆಗದೇ, ವಿಜಯಲಕ್ಷ್ಮಿ ಬಳಿ ಇನ್ನಷ್ಟು ಹಣ ಇದೆ ಎಂದು ತಿಳಿದು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾನೆ. ಪ್ಲಾನ್ ಪ್ರಕಾರ ರಾಕೇಶ್ ಬೈಕ್‌ನಿಂದ ವಿಜಯಲಕ್ಷ್ಮಿಗೆ ಡಿಕ್ಕಿ…

Read More

ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತಗಳು – ಬಸ್‌ ಪಲ್ಟಿಯಾಗಿ ವಿದ್ಯಾರ್ಥಿ ಸಾವು, ಶಾಮನೂರು ಬಳಿ ಕಾರು ಡಿಕ್ಕಿಗೆ ಇಬ್ಬರ ದುರ್ಮರಣ

ದಾವಣಗೆರೆಯಲ್ಲಿ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಮೂವರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಸಾರಿಗೆ ಬಸ್‌ನ ಆ್ಯಕ್ಸಲ್ ತುಂಡಾದ ಪರಿಣಾಮ ಬಸ್‌ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ದರ್ಶನ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ…

Read More

ಬೆಂಗಳೂರಿನಲ್ಲಿ ಶಾಕ್ ಘಟನೆ: ರಕ್ಷಕರಂತೆ ನಟಿಸಿ ಮಹಿಳೆ ಕೊಲೆ ಮಾಡಿದ ಕಿರಾತಕರು

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವಂತಹ ಸಿನಿಮೀಯ ಕ್ರೈಂ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣ ಮತ್ತು ಚಿನ್ನಾಭರಣ ದೋಚುವ ಉದ್ದೇಶದಿಂದ ಒಂಟಿ ಮಹಿಳೆಯನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಪ್ರಕರಣವನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇದಿಸಿದ್ದಾರೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ರಾಕೇಶ್ ಎಂಬಾತ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತ ಸಂಭವಿಸಿದ ತಕ್ಷಣವೇ ಇತರ ಆರೋಪಿಗಳು ಸ್ಥಳಕ್ಕೆ ಬಂದು ರಕ್ಷಕರಂತೆ ನಟಿಸಿ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ…

Read More

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ‘ಶಿವಾನಿ’ ಸಾವು

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜನಪ್ರಿಯ ಹೆಣ್ಣು ಜಿರಾಫೆ ‘ಶಿವಾನಿ’ ಮೃತಪಟ್ಟಿರುವುದು ಪ್ರವಾಸಿಗರು ಮತ್ತು ಸಿಬ್ಬಂದಿಗೆ ಆಘಾತ ತಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 3 ವರ್ಷ 10 ತಿಂಗಳ ಶಿವಾನಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಮೇ 3ರಿಂದ ಆಹಾರ ಸೇವನೆ ನಿಲ್ಲಿಸಿದ್ದ ಜಿರಾಫೆಯನ್ನು ಪಶುವೈದ್ಯರ ತಂಡ ನಿಗಾದಲ್ಲಿಟ್ಟು ಚಿಕಿತ್ಸೆ ನೀಡುತ್ತಿತ್ತು. ಆದರೆ ಗುರುವಾರ ಬೆಳಗ್ಗೆ ಸುಮಾರು 11 ಗಂಟೆಗೆ ಶಿವಾನಿ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಸ್ಟ್‌ಮಾರ್ಟಂ ವರದಿಯಲ್ಲಿ…

Read More

ಅಕ್ರಮ ಅಕ್ಕಿ ಸಾಗಾಣೆದಾರರಿಂದ 3 ಲಕ್ಷ ವಸೂಲಿ ಆರೋಪ: ಬಳ್ಳಾರಿ ಎಸ್ಪಿ ಗನ್‌ಮ್ಯಾನ್ ಅಂದರ್

ಬಳ್ಳಾರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಣೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಜಿಲ್ಲೆಯ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್‌ಮ್ಯಾನ್ ದೇವರಾಜ್‌ರನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದವರಿಂದ ಹಣ ವಸೂಲಿ ಮಾಡಿದ ಆರೋಪದಡಿ ದೇವರಾಜ್ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ. ಮಡಕೇರಿಯಿಂದ ಆಂಧ್ರಪ್ರದೇಶದತ್ತ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಆರೋಪಿಗಳು ಅಡ್ಡಗಟ್ಟಿದ್ದರು ಎನ್ನಲಾಗಿದೆ. ತಾವು ಎಸ್ಪಿ ಸ್ಕ್ವಾಡ್ ಅಧಿಕಾರಿಗಳು ಎಂದು ಹೇಳಿಕೊಂಡು ಮೊದಲಿಗೆ ಐದು ಲಕ್ಷ…

Read More

ತುಮಕೂರಿನಲ್ಲಿ ಹಕ್ಕಿ ಜ್ವರ ಭೀತಿ ಹೆಚ್ಚಳ: 50ಕ್ಕೂ ಹೆಚ್ಚು ನವಿಲುಗಳ ಸಾವು, ಜಿಲ್ಲೆಯಲ್ಲಿ ಹೈ ಅಲರ್ಟ್

ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 54ಕ್ಕೂ ಹೆಚ್ಚು ನವಿಲುಗಳ ಸಾವು! ತುಮಕೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 54ಕ್ಕೂ ಹೆಚ್ಚು ನವಿಲುಗಳು ಸಾವನ್ನಪ್ಪಿರುವುದು ಆತಂಕ ಹೆಚ್ಚಿಸಿದೆ. ಈಗಾಗಲೇ ಕೆಲವು ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂಬುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ತುಮಕೂರು ತಾಲೂಕಿನ ಹಲವು ಭಾಗಗಳಲ್ಲಿ ನವಿಲುಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಇದೀಗ ಕುಣಿಗಲ್‌ನಲ್ಲಿಯೂ ನವಿಲಿನ ಕಳೆಬರ ಪತ್ತೆಯಾಗಿದೆ. ಇದರಿಂದ ಹಕ್ಕಿ ಜ್ವರ ಜಿಲ್ಲೆಯ…

Read More

ಅಪ್ರಾಪ್ತ ಹಿಂದೂ ಬಾಲಕಿ ಜೊತೆ ಹೋಟೆಲ್‌ನಲ್ಲಿ ಸಿಕ್ಕಿಬಿದ್ದ ಯುವಕ – ಪ್ರಶ್ನಿಸಿದ 8 ಭಜರಂಗದಳ ಕಾರ್ಯಕರ್ತರ ಬಂಧನ

ಕೊಪ್ಪಳದಲ್ಲಿ ಮತ್ತೊಮ್ಮೆ ಲವ್ ಜಿಹಾದ್ ಶಂಕೆ ಮೂಡಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಖಾಸಗಿ ಹೋಟೆಲ್‌ನಲ್ಲಿ ಅಪ್ರಾಪ್ತ ಹಿಂದೂ ಬಾಲಕಿ ಹಾಗೂ ಮುಸ್ಲಿಂ ಯುವಕ ಸಿಕ್ಕಿಬಿದ್ದ ಘಟನೆ ಇದೀಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಕೊಪ್ಪಳ ನಗರದ ಖಾಸಗಿ ಹೋಟೆಲ್‌ನಲ್ಲಿ ಅಪ್ರಾಪ್ತ ಬಾಲಕಿ ಜೊತೆ ಸಮೀರ್ ಎಂಬ ಮುಸ್ಲಿಂ ಯುವಕ ಇದ್ದಾನೆ ಎಂಬ ಮಾಹಿತಿ ತಿಳಿದ ಭಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರಶ್ನಿಸಿದ್ದಾರೆ. ಈ ವೇಳೆ ಯುವಕ ಮತ್ತು ಕಾರ್ಯಕರ್ತರ ನಡುವೆ ಮಾತಿನ…

Read More

ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಸಿಡಿಲಾಟ – 21ನೇ ವಯಸ್ಸಿಗೆ ನಿವೃತ್ತಿ ಆಗ್ತಾರಾ?

ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಸಿಡಿಲಾಟ – 21ನೇ ವಯಸ್ಸಿಗೆ ನಿವೃತ್ತಿ ಆಗ್ತಾರಾ? ರಾಜಸ್ಥಾನ್ ರಾಯಲ್ಸ್ ಯುವ ಆಟಗಾರ ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಸಿಡಿಲಾಟ ಮುಂದುವರಿಸಿದ್ದಾರೆ.ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಐಪಿಎಲ್ ಇತಿಹಾಸದ ವೇಗದ ಸೆಂಚುರಿಗಳ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ.ಜಸ್ಪ್ರೀತ್ ಬುಮ್ರಾ, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್‌ರಂತಹ ಬೌಲರ್‌ಗಳನ್ನೇ ಬೆರಗುಗೊಳಿಸಿದ ಬ್ಯಾಟಿಂಗ್!ಇದೀಗ ಮೈಕೆಲ್ ವಾಘನ್ ಹೇಳಿಕೆ ಭಾರೀ ವೈರಲ್ ಆಗಿದೆ. ವೈಭವ್ ಸೂರ್ಯವಂಶಿ 21ನೇ ವಯಸ್ಸಿಗೆ ನಿವೃತ್ತಿಯಾಗ್ತಾರೆ” ಎಂದು ವಾಘನ್ ವ್ಯಂಗ್ಯವಾಡಿದ್ದಾರೆ. “ಬೇಗ ಬರ್ನ್ ಔಟ್…

Read More