ಕುಣಿಗಲ್ ಬಳಿ ಭೀಕರ ಅಪಘಾತ – ತಾಯಿ, ಮಗಳು ಸ್ಥಳದಲ್ಲೇ ಸಾವು

ಕುಣಿಗಲ್ ಬಳಿ ಭೀಕರ ಅಪಘಾತ – ಬೆಂಗಳೂರಿನ ತಾಯಿ, ಮಗಳು ದುರ್ಮರಣ ಕುಣಿಗಲ್: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಉರ್ಕೆಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಜಯಮಾಲಾ (60) ಹಾಗೂ ಅವರ ಮಗಳು ರಾಜೇಶ್ವರಿ (40) ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲತಃ ರಾಯಚೂರು ಜಿಲ್ಲೆಯವರಾದ ಜಯಮಾಲಾ…

Read More

ORRನಲ್ಲಿ ಭೀಕರ ಅಪಘಾತ – ತೆಲುಗು ನಟ ಭರತ್ ಕಾಂತ್ ಸ್ಥಳದಲ್ಲೇ ಸಾವು

ಹೈದರಾಬಾದ್: ಹೊರ ವರ್ತುಲ ರಸ್ತೆ (ORR) ಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ಹಾಗೂ ಅವರ ಸ್ನೇಹಿತ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಆದಿಬಟ್ಲಾ ಸಮೀಪ ಭಾನುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಆಂಧ್ರಪ್ರದೇಶದ ನೆಲ್ಲೂರು ಮೂಲದ ಕೆ. ಭರತ್ ಕಾಂತ್ ಹಾಗೂ ಜಿ. ಸಾಯಿ ತ್ರಿಲೋಕ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲನೆ ಮಾಡುತ್ತಿದ್ದ ಭರತ್ ಕಾಂತ್ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ…

Read More

ರಾಯಚೂರಿನಲ್ಲಿ ಭೀಕರ ಅಪಘಾತ: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸಾವು, ಮೂವರಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹೀಂದ್ರಾ ಥಾರ್ ವಾಹನ ಹರಿದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಅರಗಿನಮರ ಕ್ಯಾಂಪ್ ನಿವಾಸಿ 17 ವರ್ಷದ ಭೂಮಿಕಾ ಎಂದು ಗುರುತಿಸಲಾಗಿದೆ. ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕ ರಿವರ್ಸ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದು, ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ…

Read More

ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತಗಳು – ಬಸ್‌ ಪಲ್ಟಿಯಾಗಿ ವಿದ್ಯಾರ್ಥಿ ಸಾವು, ಶಾಮನೂರು ಬಳಿ ಕಾರು ಡಿಕ್ಕಿಗೆ ಇಬ್ಬರ ದುರ್ಮರಣ

ದಾವಣಗೆರೆಯಲ್ಲಿ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಮೂವರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಸಾರಿಗೆ ಬಸ್‌ನ ಆ್ಯಕ್ಸಲ್ ತುಂಡಾದ ಪರಿಣಾಮ ಬಸ್‌ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ದರ್ಶನ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ…

Read More

ಚಾಮರಾಜನಗರದಲ್ಲಿ ಭೀಕರ ಅಪಘಾತ: ಬಾಲಕನಿಗೆ ಟೆಂಪೋ ಡಿಕ್ಕಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೈಕಲ್ ಸವಾರಿ ಮಾಡುತ್ತಿದ್ದ 11 ವರ್ಷದ ಬಾಲಕ ಯಶವಂತ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ ಬಾಲಕನಿಗೆ ಕುಟುಂಬಸ್ಥರು ಇತ್ತೀಚೆಗೆ ಸೈಕಲ್ ಕೊಡಿಸಿದ್ದರು. ಸೈಕಲ್ ಹೊಡೆಯುತ್ತಿದ್ದ ವೇಳೆ ವೇಗವಾಗಿ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟೆಂಪೋವನ್ನು…

Read More

ಮದುವೆಗೆ 10 ದಿನ ಬಾಕಿ… ವರ ಸಾವು! ಪ್ರೀವೆಡ್ಡಿಂಗ್ ಪ್ರಯಾಣವೇ ಕೊನೆಯಾಯಿತು

ಹಾಸನ: ಮದುವೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ವರನೊಬ್ಬ ದುರಂತವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮನು ಎಲ್‌.ಎನ್‌. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ನಿವಾಸಿಯಾಗಿದ್ದು, ಮೇ 10ರಂದು ಆಲೂರು ತಾಲ್ಲೂಕಿನ ತೊಗರನಹಳ್ಳಿ ಗ್ರಾಮದ ಕಾಂಚನ ಅವರೊಂದಿಗೆ ವಿವಾಹ ನಿಗದಿಯಾಗಿತ್ತು. ಇಂದು ಬೆಳಿಗ್ಗೆ ಪ್ರೀವೆಡ್ಡಿಂಗ್ ಶೂಟ್‌ಗಾಗಿ ವಧುವನ್ನು ಕರೆತರಲು ಮನು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ತೆರಳಿದ್ದರು….

Read More

ಬೆಂಗಳೂರು-ಮದುರೈ ಬಸ್ ಅಪಘಾತ: ಸೇಲಂನಲ್ಲಿ ಆತಂಕ

ತಮಿಳುನಾಡಿನ ಸೇಲಂ ಸಮೀಪ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ. KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಮದುರೈಗೆ ತೆರಳುತ್ತಿದ್ದ ಈ ಪಲ್ಲಕ್ಕಿ ಬಸ್ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸೇಲಂ ಬಳಿ ಸಾಗುತ್ತಿದ್ದಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಅಪಾಯವನ್ನು ಅರಿತ ಚಾಲಕ ತಕ್ಷಣ ಬಸ್ ಅನ್ನು ರಸ್ತೆ ಬದಿಯ ಮಣ್ಣಿನ ಗುಡ್ಡದ ಮೇಲೆ ಹತ್ತಿಸಿ ನಿಲ್ಲಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ….

Read More

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಬಸ್ ಪಲ್ಟಿ – ಯಾವುದೇ ಪ್ರಾಣಹಾನಿ ಇಲ್ಲ

ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮಂಗಳವಾರ ಬೆಳಗ್ಗೆ ಸರ್ಕಾರಿ ಬಸ್ ಪಲ್ಟಿಯಾಗಿದೆ. ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ 44 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಸ್ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ.

Read More

ಪ್ರಯಾಣಿಕ ರೈಲು ಅಪಘಾತ: 81ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ

ಇಂಡೋನೇಷ್ಯಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಲೆವೆಲ್ ಕ್ರಾಸಿಂಗ್‌ನಲ್ಲಿ ಟ್ಯಾಕ್ಸಿಯೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹಳಿಯಲ್ಲಿ ನಿಂತಿತ್ತು. ಇದೇ ವೇಳೆಗೆ ಮತ್ತೊಂದು ರೈಲು ಬಂದು ಮಹಿಳೆಯರ ಬೋಗಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 81 ಮಂದಿಗೆ ಗಾಯಗಳಾಗಿವೆ. ಹಲವರು ಇನ್ನೂ ಬೋಗಿಗಳೊಳಗೆ ಸಿಲುಕಿಕೊಂಡಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆ ವೇಗವಾಗಿ ಮುಂದುವರಿದಿದೆ. ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ (KNKT) ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದೆ.

Read More

ನಾಲ್ವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ: ಇಬ್ಬರ ಸಾವು, ಯುವತಿ ಕಾಲು ಕಟ್

ಶೀರ್ಷಿಕೆ:ನಾಲ್ವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ: ಇಬ್ಬರ ಸಾವು, ಯುವತಿ ಕಾಲು ಕಟ್ ರಾಯಚೂರು:ಜಾತ್ರೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿ, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆಗೆ ತೆರಳಿದ್ದ ನಾಲ್ವರು ಒಂದೇ ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದರು. ಈ ವೇಳೆ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಜ್ಜಿಹೋಗಿದ್ದು, ಮೃತರ ದೇಹಗಳು ನಜ್ಜುಗುಜ್ಜಾಗಿ…

Read More