ORRನಲ್ಲಿ ಭೀಕರ ಅಪಘಾತ – ತೆಲುಗು ನಟ ಭರತ್ ಕಾಂತ್ ಸ್ಥಳದಲ್ಲೇ ಸಾವು

ಹೈದರಾಬಾದ್: ಹೊರ ವರ್ತುಲ ರಸ್ತೆ (ORR) ಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ಹಾಗೂ ಅವರ ಸ್ನೇಹಿತ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಆದಿಬಟ್ಲಾ ಸಮೀಪ ಭಾನುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಆಂಧ್ರಪ್ರದೇಶದ ನೆಲ್ಲೂರು ಮೂಲದ ಕೆ. ಭರತ್ ಕಾಂತ್ ಹಾಗೂ ಜಿ. ಸಾಯಿ ತ್ರಿಲೋಕ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲನೆ ಮಾಡುತ್ತಿದ್ದ ಭರತ್ ಕಾಂತ್ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ…

Read More

ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ಸ್ವೀಕಾರ | ಮೋದಿ, ಶಾ ಉಪಸ್ಥಿತಿ

ಬಂಗಾಳ ರಾಜಕೀಯದಲ್ಲಿ ಹೊಸ ಇತಿಹಾಸ!ಬಿಜೆಪಿಯ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಅದ್ಧೂರಿ ಪ್ರಮಾಣ ಸ್ವೀಕಾರ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ 20 ರಾಜ್ಯಗಳ ಸಿಎಂಗಳು ಸಾಕ್ಷಿ ಸುವೇಂದು ಜೊತೆ ದಿಲೀಪ್ ಘೋಷ್ ಸೇರಿದಂತೆ ಹಲವು ನಾಯಕರು ಸಚಿವರಾಗಿ ಪ್ರಮಾಣ ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧನೆ ಮಮತಾ ಬ್ಯಾನರ್ಜಿ ಬಲಗೈಯಾಗಿದ್ದ ಸುವೇಂದು ಬಳಿಕ ಬಿಜೆಪಿ ಸೇರ್ಪಡೆ ನಂದಿಗ್ರಾಮದಿಂದ ಉದಯಿಸಿದ ‘ಜೈಂಟ್ ಕಿಲ್ಲರ್’ ಸುವೇಂದು ಅಧಿಕಾರಿ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 207…

Read More

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತಾರಕಕ್ಕೇರಿತು: ಇಂದು ಕೋಲ್ಕತ್ತಾಗೆ ಅಮಿತ್ ಶಾ ಭೇಟಿ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರ ಸ್ವರೂಪ ಪಡೆದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಾತ್ ಹತ್ಯೆಯಾದ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ನಾಯಕ ಮನೋಜ್ ಖಾನ್ ಮೇಲೆ ಕಚ್ಚಾ ಬಾಂಬ್ ದಾಳಿ ಯತ್ನ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಆತಂಕ ಸೃಷ್ಟಿಸಿದೆ. ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ದುಷ್ಕರ್ಮಿಗಳು ಅಂಗಡಿಗಳನ್ನ ಧ್ವಂಸಗೊಳಿಸಲು ಯತ್ನಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಬಿಜೆಪಿ ನಾಯಕ ಮನೋಜ್ ಖಾನ್ ಅದೃಷ್ಟವಶಾತ್ ಪಾರಾಗಿದ್ದಾರೆ. ಇದನ್ನ ರಾಜಕೀಯ ಪ್ರತೀಕಾರ ಎಂದು…

Read More

ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿ: ಪೊಲೀಸರೇ ಶಾಕ್ ಆದ ಘಟನೆ!

ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಪೋಕ್ಸೋ ಪ್ರಕರಣದ ವಿಚಾರಣೆಗೆ ಕರೆತಂದಿದ್ದ ಆರೋಪಿ ಕಾರ್ತಿಕ್ ಅಲಿಯಾಸ್ ರಾಮು, ಆತಂಕಕ್ಕೆ ಒಳಗಾಗಿ ಲಾಕರ್ ಕೀ ನುಂಗಿದ್ದಾನೆ. ಏಪ್ರಿಲ್ 24ರಂದು ನಾಪತ್ತೆ ದೂರು ಸಂಬಂಧಿಸಿ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಆತನು ಭಯದಿಂದ ಕೀ ನುಂಗಿ ಆತ್ಮಹತ್ಯೆ ಯತ್ನಿಸಿದಂತೆ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಪೊಲೀಸರು ತಕ್ಷಣವೇ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಚಿಕಿತ್ಸೆ ವೇಳೆ ಸುಮಾರು…

Read More

ತಮಿಳುನಾಡಲ್ಲಿ ಸರ್ಕಾರ ರಚಿಸಲು ವಿಜಯ್‌ಗೆ ಕಾಂಗ್ರೆಸ್ ಬೆಂಬಲ? ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಳವಣಿಗೆಯಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಕಾಂಗ್ರೆಸ್‌ನ ತಮಿಳುನಾಡು ಘಟಕವು ನಾಳೆ ಬೆಳಗ್ಗೆ ಚೆನ್ನೈನಲ್ಲಿ ಸಭೆ ಸೇರಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಜಾತ್ಯತೀತ ಸರ್ಕಾರ ಸ್ಥಾಪನೆಗೆ ಜನಾದೇಶ ಸ್ಪಷ್ಟವಾಗಿದೆ. ಬಿಜೆಪಿ ಸರ್ಕಾರವನ್ನು ರಾಜ್ಯದಲ್ಲಿ…

Read More

ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ರೆ ವಜಾಗೊಳಿಸಿ: ಹಿಮಂತ ಶರ್ಮಾ ಕಿಡಿ

ದಿಸ್ಪುರ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಗಾಳ ಜನರು ಮಮತಾ ಬ್ಯಾನರ್ಜಿಯನ್ನು ಬಹಳ ವರ್ಷಗಳಿಂದ ಸಹಿಸಿಕೊಂಡಿದ್ದಾರೆ. ಈಗ ಜನರು ಬಿಜೆಪಿಗೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಹೀಗಾಗಿ ಅವರು ಅಧಿಕಾರ ತ್ಯಜಿಸಬೇಕು ಎಂದು ಶರ್ಮಾ ಆಗ್ರಹಿಸಿದ್ದಾರೆ. “ಚುನಾವಣಾ ಫಲಿತಾಂಶ ಬಂದ ಬಳಿಕವೂ ‘ನಾನು ರಾಜೀನಾಮೆ ನೀಡುವುದಿಲ್ಲ’ ಎಂದು ಹೇಳುವುದು ಸರಿಯಲ್ಲ. ದೇಶವು ಯಾರೊಬ್ಬರ ಇಚ್ಛೆಯಂತೆ ನಡೆಯುವುದಿಲ್ಲ. ರಾಜ್ಯಪಾಲರು ನಿರ್ದಿಷ್ಟ…

Read More

ಪ್ರಧಾನಿ ಮೋದಿ ಮೇ 10ರಂದು ಬೆಂಗಳೂರಿಗೆ ಆಗಮನ

ಬೆಂಗಳೂರು: ಇದೇ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಜನ್ಮದಿನದ ಅಂಗವಾಗಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ನಗರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಭದ್ರತೆಯನ್ನು ಕೂಡ ಕಟ್ಟು ನಿಟ್ಟಾಗಿಸಲಾಗುತ್ತಿದೆ. ರಾಜಕೀಯ ಹಾಗೂ ಆಧ್ಯಾತ್ಮಿಕ ವಲಯದಲ್ಲಿ ಈ ಕಾರ್ಯಕ್ರಮ ಸಾಕಷ್ಟು ಗಮನ ಸೆಳೆದಿದ್ದು, ಸಾವಿರಾರು ಮಂದಿ ಭಾಗವಹಿಸುವ ಸಾಧ್ಯತೆ…

Read More

ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇಲ್ಲ: ಆರ್‌.ಬಿ. ತಿಮ್ಮಾಪುರ್

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ R. B. Timmapur ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳುತ್ತಿಲ್ಲ. ಮಾಧ್ಯಮಗಳೇ ಈ ವಿಚಾರವನ್ನು ಹೆಚ್ಚು ಚರ್ಚಿಸುತ್ತಿವೆ. ಯತೀಂದ್ರ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ” ಎಂದು ತಿಳಿಸಿದ್ದಾರೆ. ಇದೇ ವೇಳೆ, ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದ ಅವರು, “ಮಲ್ಲಿಕಾರ್ಜುನ…

Read More

ಹರಿಹರ ಪಂಚಮಸಾಲಿ ಪೀಠದಲ್ಲಿ ನಿಷೇಧಾಜ್ಞೆ: ಸಭೆ, ಸಮಾರಂಭಕ್ಕೆ ಜಿಲ್ಲಾಡಳಿತ ಬ್ರೇಕ್

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ದಿನದಿಂದ ದಿನಕ್ಕೆ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಸಂಘರ್ಷ ತೀವ್ರವಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಠದ ಆವರಣದಲ್ಲಿ ಯಾವುದೇ ಸಭೆ, ಸಮಾರಂಭ, ಸುದ್ದಿಗೋಷ್ಠಿ ನಡೆಸಬಾರದು ಎಂದು ಮೇ 1ರಿಂದ 30ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಚನಾನಂದ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವೆ ಕಳೆದ ಕೆಲವು ವಾರಗಳಿಂದ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ. ಮಠದಲ್ಲಿ ಮಾರ್ಚ್ 10ರಿಂದ ವಿವಿಧ ಗುಂಪುಗಳಿಂದ ನಿರಂತರ ಸಭೆಗಳು, ಸುದ್ದಿಗೋಷ್ಠಿಗಳು ನಡೆಯುತ್ತಿದ್ದು, ಪರಿಸ್ಥಿತಿ…

Read More

ಬಂಗಾಳ ಚುನಾವಣೆಯಲ್ಲಿ ಅಚ್ಚರಿ: ಮನೆ ಕೆಲಸಗಾರ್ತಿಯಿಂದ ಶಾಸಕಿ ಆದ: ಕಲಿತಾ ಮಾಝಿ

ಮನೆಗೆಲಸ ಮಾಡಿಕೊಂಡು ತಿಂಗಳಿಗೆ ₹2,500 ಸಂಪಾದಿಸುತ್ತಿದ್ದ ಮಹಿಳೆ ಈಗ ಬಿಜೆಪಿ ಶಾಸಕಿ! ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯೊಬ್ಬರ ಬದುಕು ಸಂಪೂರ್ಣವಾಗಿ ಬದಲಾಗಿದೆ. ಮನೆಗೆಲಸ ಮಾಡಿಕೊಂಡು ತಿಂಗಳಿಗೆ ಕೇವಲ ₹2,500 ಸಂಪಾದನೆ ಮಾಡುತ್ತಿದ್ದ ಕಲಿತಾ ಮಾಝಿ ಈಗ ಬಿಜೆಪಿ ಶಾಸಕಿ ಆಗಿ ಆಯ್ಕೆಯಾಗಿದ್ದಾರೆ. ಕಲಿತಾ ಮಾಝಿ ಅವರು ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಪ್ರತಿಸ್ಪರ್ಧಿಯನ್ನು 12,535 ಮತಗಳ ಅಂತರದಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ಬಾಲ್ಯದಲ್ಲೇ ಶಿಕ್ಷಣವನ್ನು…

Read More