ORRನಲ್ಲಿ ಭೀಕರ ಅಪಘಾತ – ತೆಲುಗು ನಟ ಭರತ್ ಕಾಂತ್ ಸ್ಥಳದಲ್ಲೇ ಸಾವು

ಹೈದರಾಬಾದ್: ಹೊರ ವರ್ತುಲ ರಸ್ತೆ (ORR) ಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ಹಾಗೂ ಅವರ ಸ್ನೇಹಿತ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಆದಿಬಟ್ಲಾ ಸಮೀಪ ಭಾನುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಆಂಧ್ರಪ್ರದೇಶದ ನೆಲ್ಲೂರು ಮೂಲದ ಕೆ. ಭರತ್ ಕಾಂತ್ ಹಾಗೂ ಜಿ. ಸಾಯಿ ತ್ರಿಲೋಕ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲನೆ ಮಾಡುತ್ತಿದ್ದ ಭರತ್ ಕಾಂತ್ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ…

Read More

ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ಸ್ವೀಕಾರ | ಮೋದಿ, ಶಾ ಉಪಸ್ಥಿತಿ

ಬಂಗಾಳ ರಾಜಕೀಯದಲ್ಲಿ ಹೊಸ ಇತಿಹಾಸ!ಬಿಜೆಪಿಯ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಅದ್ಧೂರಿ ಪ್ರಮಾಣ ಸ್ವೀಕಾರ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ 20 ರಾಜ್ಯಗಳ ಸಿಎಂಗಳು ಸಾಕ್ಷಿ ಸುವೇಂದು ಜೊತೆ ದಿಲೀಪ್ ಘೋಷ್ ಸೇರಿದಂತೆ ಹಲವು ನಾಯಕರು ಸಚಿವರಾಗಿ ಪ್ರಮಾಣ ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧನೆ ಮಮತಾ ಬ್ಯಾನರ್ಜಿ ಬಲಗೈಯಾಗಿದ್ದ ಸುವೇಂದು ಬಳಿಕ ಬಿಜೆಪಿ ಸೇರ್ಪಡೆ ನಂದಿಗ್ರಾಮದಿಂದ ಉದಯಿಸಿದ ‘ಜೈಂಟ್ ಕಿಲ್ಲರ್’ ಸುವೇಂದು ಅಧಿಕಾರಿ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 207…

Read More

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತಾರಕಕ್ಕೇರಿತು: ಇಂದು ಕೋಲ್ಕತ್ತಾಗೆ ಅಮಿತ್ ಶಾ ಭೇಟಿ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರ ಸ್ವರೂಪ ಪಡೆದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಾತ್ ಹತ್ಯೆಯಾದ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ನಾಯಕ ಮನೋಜ್ ಖಾನ್ ಮೇಲೆ ಕಚ್ಚಾ ಬಾಂಬ್ ದಾಳಿ ಯತ್ನ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಆತಂಕ ಸೃಷ್ಟಿಸಿದೆ. ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ದುಷ್ಕರ್ಮಿಗಳು ಅಂಗಡಿಗಳನ್ನ ಧ್ವಂಸಗೊಳಿಸಲು ಯತ್ನಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಬಿಜೆಪಿ ನಾಯಕ ಮನೋಜ್ ಖಾನ್ ಅದೃಷ್ಟವಶಾತ್ ಪಾರಾಗಿದ್ದಾರೆ. ಇದನ್ನ ರಾಜಕೀಯ ಪ್ರತೀಕಾರ ಎಂದು…

Read More

ತಮಿಳುನಾಡಲ್ಲಿ ಸರ್ಕಾರ ರಚಿಸಲು ವಿಜಯ್‌ಗೆ ಕಾಂಗ್ರೆಸ್ ಬೆಂಬಲ? ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಳವಣಿಗೆಯಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಕಾಂಗ್ರೆಸ್‌ನ ತಮಿಳುನಾಡು ಘಟಕವು ನಾಳೆ ಬೆಳಗ್ಗೆ ಚೆನ್ನೈನಲ್ಲಿ ಸಭೆ ಸೇರಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಜಾತ್ಯತೀತ ಸರ್ಕಾರ ಸ್ಥಾಪನೆಗೆ ಜನಾದೇಶ ಸ್ಪಷ್ಟವಾಗಿದೆ. ಬಿಜೆಪಿ ಸರ್ಕಾರವನ್ನು ರಾಜ್ಯದಲ್ಲಿ…

Read More

ಹರಿಹರ ಪಂಚಮಸಾಲಿ ಪೀಠದಲ್ಲಿ ನಿಷೇಧಾಜ್ಞೆ: ಸಭೆ, ಸಮಾರಂಭಕ್ಕೆ ಜಿಲ್ಲಾಡಳಿತ ಬ್ರೇಕ್

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ದಿನದಿಂದ ದಿನಕ್ಕೆ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಸಂಘರ್ಷ ತೀವ್ರವಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಠದ ಆವರಣದಲ್ಲಿ ಯಾವುದೇ ಸಭೆ, ಸಮಾರಂಭ, ಸುದ್ದಿಗೋಷ್ಠಿ ನಡೆಸಬಾರದು ಎಂದು ಮೇ 1ರಿಂದ 30ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಚನಾನಂದ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವೆ ಕಳೆದ ಕೆಲವು ವಾರಗಳಿಂದ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ. ಮಠದಲ್ಲಿ ಮಾರ್ಚ್ 10ರಿಂದ ವಿವಿಧ ಗುಂಪುಗಳಿಂದ ನಿರಂತರ ಸಭೆಗಳು, ಸುದ್ದಿಗೋಷ್ಠಿಗಳು ನಡೆಯುತ್ತಿದ್ದು, ಪರಿಸ್ಥಿತಿ…

Read More

ಬಂಗಾಳ ಚುನಾವಣೆಯಲ್ಲಿ ಅಚ್ಚರಿ: ಮನೆ ಕೆಲಸಗಾರ್ತಿಯಿಂದ ಶಾಸಕಿ ಆದ: ಕಲಿತಾ ಮಾಝಿ

ಮನೆಗೆಲಸ ಮಾಡಿಕೊಂಡು ತಿಂಗಳಿಗೆ ₹2,500 ಸಂಪಾದಿಸುತ್ತಿದ್ದ ಮಹಿಳೆ ಈಗ ಬಿಜೆಪಿ ಶಾಸಕಿ! ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯೊಬ್ಬರ ಬದುಕು ಸಂಪೂರ್ಣವಾಗಿ ಬದಲಾಗಿದೆ. ಮನೆಗೆಲಸ ಮಾಡಿಕೊಂಡು ತಿಂಗಳಿಗೆ ಕೇವಲ ₹2,500 ಸಂಪಾದನೆ ಮಾಡುತ್ತಿದ್ದ ಕಲಿತಾ ಮಾಝಿ ಈಗ ಬಿಜೆಪಿ ಶಾಸಕಿ ಆಗಿ ಆಯ್ಕೆಯಾಗಿದ್ದಾರೆ. ಕಲಿತಾ ಮಾಝಿ ಅವರು ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಪ್ರತಿಸ್ಪರ್ಧಿಯನ್ನು 12,535 ಮತಗಳ ಅಂತರದಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ಬಾಲ್ಯದಲ್ಲೇ ಶಿಕ್ಷಣವನ್ನು…

Read More

ತಮಿಳುನಾಡಿನಲ್ಲಿ ಟಿವಿಕೆ ಗೆಲುವು: ವಿಜಯ್ ಬಗ್ಗೆ ತಂದೆಯ ಭಾವನಾತ್ಮಕ ಮಾತುಗಳು

ಚೆನ್ನೈನಲ್ಲಿ ಟಿವಿಕೆ ಪಕ್ಷದ ಗೆಲುವಿನ ನಂತರ ನಟ ವಿಜಯ್ ಅವರ ತಂದೆ ಎಸ್.ಎ ಚಂದ್ರಶೇಖರ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಅವರು ತಮ್ಮ ಮಗನ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದು, ವಿಜಯ್‌ಗೆ ಗೆಲುವಿನ ಬಗ್ಗೆ ಯಾವುದೇ ಅನುಮಾನ ಇರಲಿಲ್ಲ ಎಂದು ಹೇಳಿದ್ದಾರೆ. ಕಳೆದ ಎರಡು ವರ್ಷಗಳಿಂದ ವಿಜಯ್‌ನ ಆತ್ಮವಿಶ್ವಾಸವನ್ನು ನೋಡುತ್ತಿದ್ದೆ ಎಂದು ಹೇಳಿದ ಅವರು, ಅವನು ತನ್ನದೇ ದಾರಿಯಲ್ಲಿ ರಾಜಕೀಯವಾಗಿ ಬೆಳೆಯುತ್ತಿದ್ದಾನೆ ಎಂದು ತಿಳಿಸಿದ್ದಾರೆ. “ನಾನು ಮುಖ್ಯಮಂತ್ರಿಯಾಗುತ್ತೇನೆ” ಎಂದು ವಿಜಯ್ ಮೊದಲೇ ಹೇಳಿದ್ದನ್ನು ನೆನಪಿಸಿಕೊಂಡ ಅವರು, ಇದು ಐತಿಹಾಸಿಕ…

Read More

ಬಾರಾಮತಿ ಉಪಚುನಾವಣೆ: ಸುನೇತ್ರಾ ಪವಾರ್ ಭರ್ಜರಿ ಮುನ್ನಡೆ, ಐತಿಹಾಸಿಕ ಗೆಲುವಿನತ್ತ ದಾಪುಗಾಲು

ಬಾರಾಮತಿ ವಿಧಾನಸಭಾ ಉಪಚುನಾವಣೆಯಲ್ಲಿ ಎನ್‌ಸಿಪಿ ಅಭ್ಯರ್ಥಿ ಸುನೇತ್ರಾ ಪವಾರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 24 ಸುತ್ತುಗಳ ಮತ ಎಣಿಕೆಯಲ್ಲಿ 15 ಸುತ್ತುಗಳಲ್ಲೇ ಅವರು 1.32 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸ್ಪಷ್ಟ ಮುನ್ನಡೆ ಪಡೆದುಕೊಂಡಿದ್ದಾರೆ. ಅಜಿತ್ ಪವಾರ್ ನಂತರ ನಡೆದ ಈ ಮೊದಲ ಚುನಾವಣೆಯಲ್ಲಿ, ಪವಾರ್ ಕುಟುಂಬದ ಭದ್ರಕೋಟೆ ಎಂದು ಗುರುತಿಸಲ್ಪಡುವ ಬಾರಾಮತಿ ಕ್ಷೇತ್ರದಲ್ಲಿ ಎನ್‌ಸಿಪಿ ತನ್ನ ಹಿಡಿತವನ್ನು ಮತ್ತೊಮ್ಮೆ ದೃಢಪಡಿಸುತ್ತಿದೆ. ಮತದಾರರ ವಿಶ್ವಾಸಕ್ಕೆ ಧನ್ಯವಾದ ತಿಳಿಸಿದ ಸುನೇತ್ರಾ ಪವಾರ್, ಅಭಿವೃದ್ಧಿ ಕಾರ್ಯಗಳ ಮೂಲಕ ಅಜಿತ್ ಪವಾರ್…

Read More

ದೇವರ ನಾಡಿನಲ್ಲಿ ಬಿಜೆಪಿ ಭರ್ಜರಿ ಗೆಲುವು – ರಾಜಕೀಯ ಸಮೀಕರಣ ಬದಲಾವಣೆ ಸೂಚನೆ

ದೇವರ ನಾಡು ಎಂದು ಕರೆಯಲಾಗುವ ಕೇರಳದಲ್ಲಿ ಈ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಹತ್ವದ ಸಾಧನೆ ಮಾಡಿದೆ. ದಶಕಗಳಿಂದ ನೆಲೆ ಕಂಡುಕೊಳ್ಳಲು ಹೋರಾಡುತ್ತಿದ್ದ ಕಮಲ ಪಕ್ಷ ಈ ಬಾರಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ನೇಮಮ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ, ಬಿ.ಬಿ. ಗೋಪಕುಮಾರ್ ಚಾತನ್ನೂರಿನಲ್ಲಿ ಜಯಭೇರಿ ಬಾರಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಮುರಳೀಧರನ್ ಕಲಕುಟ್ಟಂದಿನಲ್ಲಿ ವಿಜಯ ಸಾಧಿಸಿದ್ದಾರೆ. 2016ರಲ್ಲಿ ಮೊದಲ ಬಾರಿಗೆ ನೇಮಮ್ ಕ್ಷೇತ್ರದಲ್ಲಿ…

Read More

ವಿಜಯ್ ರಾಜಕೀಯ ಗೆಲುವು: ‘ಜನ ನಾಯಗನ್’ ಚಿತ್ರಕ್ಕೆ ಹೊಸ ಜೀವ

ವಿಜಯ್‌ಗೆ ಚಿತ್ರರಂಗಕ್ಕೆ ಗುಡ್‌ಬೈ? ‘ಜನ ನಾಯಗನ್’ ಚಿತ್ರಕ್ಕೆ ರಾಜಕೀಯ ಮೈಲೇಜ್! ತಮಿಳುನಾಡು ರಾಜಕೀಯದಲ್ಲಿ ನಟ ದಳಪತಿ ವಿಜಯ್ ಹೊಸ ಅಲೆ ಸೃಷ್ಟಿಸಿದ್ದಾರೆ. ರಾಜಕೀಯ ಪ್ರವೇಶದ ಬಳಿಕ ಸಿಎಂ ಗದ್ದುಗೆ ಸನಿಹಕ್ಕೆ ಬಂದಿರುವ ವಿಜಯ್ ಇದೀಗ ಕಾಲಿವುಡ್‌ಗೆ ಗುಡ್‌ಬೈ ಹೇಳುವ ಸಾಧ್ಯತೆ ಹೆಚ್ಚಾಗಿದೆ. ಇದೇ ವಿಚಾರ ಅಭಿಮಾನಿಗಳಲ್ಲಿ ಭಾರೀ ಆತಂಕ ಹುಟ್ಟಿಸಿದೆ. ಕಳೆದ ಹಲವು ವರ್ಷಗಳಿಂದ ವಿಜಯ್ ಸಿನಿಮಾಗಳು ಕೇವಲ ಮನರಂಜನೆಗೆ ಸೀಮಿತವಾಗಿರಲಿಲ್ಲ. ಅವರ ಚಿತ್ರಗಳಲ್ಲಿ ರಾಜಕೀಯ ವ್ಯಂಗ್ಯ, ಸಾಮಾಜಿಕ ಸಮಸ್ಯೆಗಳ ಕುರಿತ ಸಂದೇಶಗಳು ಹೆಚ್ಚಾಗಿ ಕಾಣಿಸಿಕೊಂಡಿದ್ದವು. ವಿಶೇಷವಾಗಿ…

Read More